ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್‌ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್‌ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್‌ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm