ಬ್ರೇಕಿಂಗ್ ನ್ಯೂಸ್
29-08-24 02:51 pm HK News Desk ಕರ್ನಾಟಕ
ಕೊಪ್ಪಳ, ಆಗಸ್ಟ್ 29: ಗಂಗಾವತಿ ನಗರದಿಂದ ಅಂಜನಾದ್ರಿ ಬೆಟ್ಟಕ್ಕೆ ಸಾಗುವ ರಸ್ತೆ ಮಧ್ಯೆ ಹಾಕಿರುವ ಬಿಲ್ಲು, ಬಾಣಗಳ ಮಾದರಿಯ ಆಕರ್ಷಕ ವಿದ್ಯುತ್ ಕಂಬಗಳು ಕೋಮು ಭಾವನೆಗೆ ಕಾರಣವಾಗುತ್ತೆ ಎಂಬ ಎಸ್ಡಿಪಿಐ ಆಕ್ಷೇಪಕ್ಕೆ ತಹಶೀಲ್ದಾರ್ ಸ್ಪಂದಿಸಿದ್ದು ಅವುಗಳನ್ನು ತೆರವುಗೊಳಿಸಲು ಆದೇಶ ಮಾಡಿರುವುದು ಹಿಂದು ಸಂಘಟನೆಗಳ ಕೆಂಗಣ್ಣಿಗೆ ಆಕ್ರೋಶಕ್ಕೆ ಗುರಿಯಾಗಿದ್ದು ವಿವಾದಕ್ಕೆ ಕಾರಣವಾಗಿದೆ. ಆಕರ್ಷಕ ವಿದ್ಯುತ್ ಕಂಬಗಳನ್ನು ತೆರವಿಗೆ ಸೂಚಿಸಿದ್ದಲ್ಲದೆ, ಇವನ್ನು ಹಾಕಿರುವ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್ ಐಡಿಎಲ್) ವಿರುದ್ಧವೇ ಪ್ರಕರಣ ದಾಖಲಿಸಲು ತಹಸೀಲ್ದಾರ್ ಸೂಚನೆ ನೀಡಿದ್ದಾರೆ.
ಆಗಸ್ಟ್ 28 ರಂದು ತಹಶೀಲ್ದಾರ್ ಗಂಗಾವತಿ ನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಿಗೆ ಬರೆದಿರುವ ಪತ್ರ ಲೀಕ್ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗಂಗಾವತಿ ನಗರಸಭೆ ವ್ಯಾಪ್ತಿಯ ಜುಲೈ ನಗರದಿಂದ ರಾಣಾ ಪ್ರತಾಪ್ ವೃತ್ತದ ವರೆಗಿನ ರಸ್ತೆಯಲ್ಲಿ ಕೆಐಆರ್‌ಡಿಎಲ್ ಸಂಸ್ಥೆ ಸ್ಥಾಪಿಸಿದ ವಿದ್ಯುತ್ ಕಂಬಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಿದೆ. ಸಾರ್ವಜನಿಕರ ಶಾಂತಿಗೆ ಭಂಗ ಉಂಟುಮಾಡುವ ಸಾಧ್ಯತೆ ಇರುವುದರಿಂದ ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಕಾಮಗಾರಿ ಕೈಗೊಂಡಿರುವ ಕೆಆರ್‌ಐಡಿಎಲ್ ಎಂಜಿನಿಯರ್ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡು ವರದಿ ನೀಡುವಂತೆ ತಹಶೀಲ್ದಾರ್ ನಾಗರಾಜ್ ಅವರು ಪೊಲೀಸ್ ಠಾಣೆಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.
ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂಬ ಒತ್ತಾಯ ಹಿಂದಿನಿಂದಲೂ ಇದೆ. ಶಾಸಕ ಜನಾರ್ದನ ರೆಡ್ಡಿ ಅವರು ಚುನಾವಣಾ ಪ್ರಚಾರದಲ್ಲಿಯೂ ಈ ಬಗ್ಗೆ ಭರವಸೆ ನೀಡಿದ್ದರು. ಅದರಂತೆ, ಬೆಟ್ಟಕ್ಕೆ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳಿರುವಂತೆ ಚಿತ್ರಗಳನ್ನು ಅಳವಡಿಸಲಾಗಿತ್ತು. ಆಕರ್ಷಕ ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೆ, ಎರಡು ದಿನಗಳ ಹಿಂದೆ ಗಂಗಾವತಿ ನಗರಸಭೆಯ ಸರ್ವ ಸದಸ್ಯರ ಸಭೆಯಲ್ಲೂ ಶಾಸಕ ಜನಾರ್ದನ ರೆಡ್ಡಿ ವಿಷಯ ಪ್ರಸ್ತಾಪಿಸಿ, ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು.
ಆದರೆ ಇದರ ಬೆನ್ನಲ್ಲೇ ಎಸ್ಡಿಪಿಐ ಕ್ಯಾತೆ ತೆಗೆದಿದ್ದು ಬೀದಿ ದೀಪಗಳಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಹೇಳಿ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಜಿಲ್ಲಾಧಿಕಾರಿ ಮೌಖಿಕ ಸೂಚನೆಯಂತೆ, ತಹಸೀಲ್ದಾರ್ ಕ್ರಮ ಜರುಗಿಸಲು ಪೊಲೀಸರಿಗೆ ತಿಳಿಸಿದ್ದಾರೆ. ಪ್ರವಾಸಿ ತಾಣ ಅಂಜನಾದ್ರಿ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತಿಯಿಂದ ಬರುತ್ತಾರೆ. ಇಂತಹ ಪವಿತ್ರ ಜಾಗದಲ್ಲಿ ಅಳವಡಿಸಿದ ಬೀದಿ ದೀಪಗಳು ಕೋಮು ಭಾವನೆ ಕೆರಳಿಸುವುದು ಹೇಗೆ ಎಂದು ಹಿಂದು ಸಂಘಟನೆ ನಾಯಕರು ಆಕ್ಷೇಪ ಎತ್ತಿದ್ದಾರೆ.
On 28th August, Wednesday, the Koppal district collector ordered the removal of decorative electric lamps on the streets of Gangavathi taluka, which is believed to be the birthplace of Lord Hanuman. The electric lamps on the streets of the city portrayed ‘Gada’ and ‘Dhanush’ like ornamental structures, to symbolise the weapons carried by Lord Rama and Lord Hanuman.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm