ಬ್ರೇಕಿಂಗ್ ನ್ಯೂಸ್
09-12-20 06:04 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಶಾಲೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆಯ ಸಭೆಯಲ್ಲಿ ಮಾತನಾಡಿದ ಸಚಿವರು, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆದಷ್ಟು ಬೇಗ ಆರಂಭಿಸಬೇಕೆಂಬ ಒತ್ತಾಯ ಇದೆ. ಈ ಬಗ್ಗೆ ಆರೋಗ್ಯ ಇಲಾಖೆಯ ತಜ್ಞರ ಮಾಹಿತಿ ಪಡೆದು ನಿರ್ಧರಿಸಲಾಗುವುದು ಎಂದರು.

ಹಲವು ಸಮಯಗಳ ಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮಗಳ ಬಗ್ಗೆ ಅರಿವಿಗೆ ಬಂದಿದೆ. ಈ ಬಗ್ಗೆ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರು ಕೂಡ ಗಮನಕ್ಕೆ ತಂದಿದ್ದಾರೆ. ಮಕ್ಕಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವಿಶ್ವವಿದ್ಯಾನಿಲಯ ಮತ್ತು ಉನ್ನತ ಶಿಕ್ಷಣದ ತರಗತಿಗಳನ್ನು ಆರಂಭಿಸಲಾಗಿದೆ. ಪದವಿಪೂರ್ವ ತರಗತಿಗಳ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.

ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ, ಮಂಗಳೂರಿನ ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್, ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ನಾಯಕ್, ಮಂಗಳೂರಿನ ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾಯ್ಕ್, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸೇರಿ ರಾಜ್ಯದ ವಿವಿಧ ಕಾಲೇಜುಗಳ 20ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm