ಬ್ರೇಕಿಂಗ್ ನ್ಯೂಸ್
06-09-24 10:16 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿರುವುದನ್ನು ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಟೀಕಿಸಿದ್ದಾರೆ. ಎತ್ತಿನಹೊಳೆ ಯೋಜನೆಯಲ್ಲಿ ಉದ್ದೇಶಿತ 24 ಟಿಎಂಸಿ ನೀರು ಲಭ್ಯವಿಲ್ಲ ಎಂದು ಐಐಎಸ್ಸಿ, ಕೇಂದ್ರ ಜಲ ಆಯೋಗ ಮತ್ತು ಸರ್ಕಾರ ನಿಗದಿಪಡಿಸಿದ ಸಂಸ್ಥೆ ಹೇಳಿದ್ದರೂ, ಬೆಟ್ಟ ಅಗೆದು ಇಲಿ ಹಿಡಿದ ರೀತಿ ಸಾವಿರಾರು ಕೋಟಿ ಖರ್ಚು ಮಾಡಿ ಏಳು ಜಿಲ್ಲೆಗಳಿಗೆ ನೀರು ಹರಿಸುತ್ತೇವೆಂದು ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆಂಜನೇಯ ರೆಡ್ಡಿ ಹೇಳಿದ್ದಾರೆ.
2009ರ ಲೋಕಸಭಾ ಚುನಾವಣೆ ಸಮಯದಲ್ಲಿ ಎತ್ತಿನಹೊಳೆ ಸೇರಿದಂತೆ ಮತ್ತಿತರೆ ಕೆಲವು ಹಳ್ಳಗಳಿಂದ 8 ಟಿಎಂಸಿ ನೀರನ್ನು ತಂದು ಕೇವಲ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಶುದ್ಧ ಕುಡಿಯುವ ನೀರನ್ನು ಪೂರೈಸುವ ಉದ್ದೇಶದಿಂದ ಆರಂಭವಾದ ಯೋಜನೆ, 2014ರ ಲೋಕಸಭಾ ಚುನಾವಣೆ ವೇಳೆ ಚಿಕ್ಕಬಳ್ಳಾಪುರದಲ್ಲಿ ಗುದ್ದಲಿ ಪೂಜೆ ನೆರವೇರಿಸುವ ವೇಳೆಗೆ ಯೋಜನೆಯ ವ್ಯಾಪ್ತಿ 7 ಜಿಲ್ಲೆಗಳಿಗೆ ಹರಡಿತ್ತು. ಅದರ ಪ್ರಕಾರ ಹಾಸನ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ 38 ಪಟ್ಟಣಗಳ 6,657 ಗ್ರಾಮಗಳ ಸುಮಾರು 75 ಲಕ್ಷ ಜನರಿಗೆ ಶಾಶ್ವತ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಮತ್ತು 527 ಕೆರೆಗಳನ್ನು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವುದಾಗಿ ಹೇಳಲಾಗಿತ್ತು.
ಯೋಜನೆಯ ಆರಂಭಿಕ ಯೋಜನಾ ವೆಚ್ಚ 8,323 ಕೋಟಿ ಇದ್ದದ್ದು , ನಂತರ 2013ರಲ್ಲಿ 12,912 ಕೋಟಿಗಳಿಗೆ ಏರಿಕೆಯಾಗಿತ್ತು. ಈಗ ಮತ್ತೊಮ್ಮೆ 2023 ರಲ್ಲಿ 23,251 ಕೋಟಿಗಳಿಗೆ ಹೆಚ್ಚಳವಾಗಿದೆ. ಆದರೆ, ಎತ್ತಿನಹೊಳೆ ಯೋಜನಾ ವ್ಯಾಪ್ತಿಯಲ್ಲಿ ಬರುವ ವಾರ್ಷಿಕ ಸರಾಸರಿ ಮಳೆ ಪ್ರಮಾಣದ ಆಧಾರದಲ್ಲಿ 8 ಟಿಎಂಸಿ ನೀರಿನ ಲಭ್ಯತೆ ಇದೆ ಎಂದು ಮೂಲ ವರದಿ ಹೇಳಿತ್ತು.
ಇದಲ್ಲದೆ_ಭಾರತೀಯ ವಿಜ್ಞಾನ ಸಂಸ್ಥೆಯ(IISC) ವಿಜ್ಞಾನಿಗಳೂ 8 ಟಿಎಂಸಿ ಎಂಬುದನ್ನು ಖಚಿತಪಡಿಸಿದ್ದರು. ಆದರೆ ಸರ್ಕಾರವು 24 ಟಿಎಂಸಿ ನೀರು ಲಭ್ಯವಿದೆ ಎಂದು ಲಾಭಕೋರ ಗುತ್ತಿಗೆದಾರರ ವರದಿಯನ್ನೇ ನಂಬಿಕೊಂಡು 15 ವರ್ಷಗಳಿಂದ ಬರಪೀಡಿತ ಜಿಲ್ಲೆಯ ಜನರಿಗೆ ಹಸಿ ಹಸಿ ಸುಳ್ಳು ಹೇಳಿಕೊಂಡು ಮೋಸ ಮಾಡಿಕೊಂಡು ಬಂದಿದೆ. ಸೆಂಟ್ರಲ್ ವಾಟರ್ ಕಮಿಷನ್ (ಕೇಂದ್ರೀಯ ಜಲ ಆಯೋಗ) ವರದಿಯ ಪ್ರಕಾರ 24 ಟಿಎಂಸಿ ನೀರು ಲಭ್ಯವಿಲ್ಲ ಎಂದು 2012ರಲ್ಲಿಯೇ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿತ್ತು . 2015 ರಲ್ಲಿಯೇ (IISc) ಭಾರತೀಯ ವಿಜ್ಞಾನ ಸಂಸ್ಥೆಯು 24 ಟಿಎಂಸಿ ನೀರು ಇಳುವರಿ ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈಡ್ರಾಲಜಿ ಸಂಸ್ಥೆಯೂ ಸಹ ನೀರಿನ ಇಳುವರಿಯ ಬಗ್ಗೆ ಸಂಶಯವನ್ನು ವ್ಯಕ್ತಪಡಿಸಿ ಮರು ಅಧ್ಯಯನ ನಡೆಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಇಂತಹ ವೈಜ್ಞಾನಿಕ ಸಂಸ್ಥೆಗಳ ವರದಿಯನ್ನು ಪರಿಗಣಿಸದೆ ಸಾವಿರಾರು ಕೋಟಿ ಹಣ ಖರ್ಚು ಮಾಡಿದ ನಂತರ ಸರ್ಕಾರವೇ ನಿಯೋಜನೆ ಮಾಡಿರುವ ಸಂಸ್ಥೆಯು ತನ್ನ ಟೆಲಿಮೆಟ್ರಿಕ್ ಮಾಪನಾ ವರದಿಯಲ್ಲಿ 2023ರ ಮಳೆಗಾಲದ ಎತ್ತಿನಹೊಳೆ ಯೋಜನೆಯ ನೀರಿನ ಇಳುವರಿ ಕೇವಲ 8.5 ಟಿಎಂಸಿ ಮಾತ್ರ ಲಭ್ಯವಿದೆ ಎಂದು ಹೇಳಿದೆ.
ಇವೆಲ್ಲದರ ಮಧ್ಯೆ, 15 ವರ್ಷಗಳಿಂದ 24 ಟಿಎಂಸಿ ನೀರು ಲಭ್ಯವಾಗುತ್ತದೆ ಎಂಬ ಕಾಲ್ಪನಿಕ ಸಂಖ್ಯೆಯನ್ನು ಇಟ್ಟುಕೊಂಡು ಏಳು ಜಿಲ್ಲೆಗಳಿಗೆ ನೀರಿನ ಹಂಚಿಕೆ ಮಾಡಲಾಗಿದೆ. ಇದರಿಂದ ಕಟ್ಟಕಡೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ತಲುಪುವುದು ಅಸಾಧ್ಯವಾಗಿದೆ. ಸಿದ್ದರಾಮಯ್ಯನವರೇ, ನಿಮಗೆ ಬದ್ಧತೆ ಇದ್ದರೆ ಈ ಯೋಜನೆಯ ಪೂಜೆಯನ್ನು ಕಟ್ಟಕಡೆಯ ಜಿಲ್ಲೆ ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಕೆರೆಯಲ್ಲಿ ಇಟ್ಟುಕೊಳ್ಳಬೇಕಿತ್ತು. ನಂಗಲಿ ಗ್ರಾಮದ ಜನರಿಗೆ ಕುಡಿಯುವ ನೀರನ್ನು ಪೂರೈಸಿ ಅಲ್ಲಿ ಪೂಜೆ ಮಾಡಿದ್ದರೆ ಯೋಜನೆ ಸಾಕಾರಗೊಳುತ್ತಿತ್ತು, ಅದು ಅಸಾಧ್ಯ ಎಂಬುದು ಮುಖ್ಯಮಂತ್ರಿಗಳಿಗೂ ಗೊತ್ತಿದೆ.
ಈಗಲಾದರೂ ವೈಜ್ಞಾನಿಕ ಸಂಸ್ಥೆಗಳಿಂದ ನೈಜವಾದ ನೀರಿನ ಇಳುವರಿಯ ಬಗ್ಗೆ ಮರು ಅಧ್ಯಯನ ಮಾಡಿಸುವ ಬದ್ಧತೆ ತೋರಿಸಿ. ಸಿದ್ದರಾಮಯ್ಯನವರು ಬರಪೀಡಿತ ಜಿಲ್ಲೆಗಳಿಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ಕಡೆಗೆ ಮುಕ್ತವಾಗಿ ತೆರೆದುಕೊಳ್ಳಲಿ ಎಂದು ಆಗ್ರಹಿಸುತ್ತೇವೆ. ತಪ್ಪಿದಲ್ಲಿ ಎತ್ತಿನಹೊಳೆಯ ಮೋಸವನ್ನು ಹಳ್ಳಿ ಹಳ್ಳಿಗೂ ತಲುಪಿಸುತ್ತೇವೆ ಎಂದು ಆಂಜನೇಯ ರೆಡ್ಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The Visvesaraya Jala Nigam Limited (VJNL), the agency implementing the Yettinahole Integrated Drinking Water Supply Project, is hopeful of carrying water to Kolar and Chickballapur districts by November 2026, and completing the ambitious project by March 31, 2027.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm