ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am