ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm