ಬ್ರೇಕಿಂಗ್ ನ್ಯೂಸ್
24-09-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.
'ಮತ್ತೊಮ್ಮೆ ಹೇಳುತ್ತೇನೆ, ಮುಖ್ಯಮಂತ್ರಿಗೆ ಯಾವುದೇ ಹಿನ್ನಡೆಯಾಗಿಲ್ಲ. ನಾನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ವಿರುದ್ದದ ದೊಡ್ಡ ಪಿತೂರಿಯಾಗಿದೆ. ನಾನು ಎಲ್ಲಾ ದೋಷ ಆರೋಪಗಳಿಂದ ಹೊರಗೆ ಬಂದಿಲ್ಲವೇ? ಹಾಗೆಯೇ ಈ ವಿಚಾರದಲ್ಲಿಯೂ ಹೋರಾಟ ಮಾಡುತ್ತೇವೆ. ದೇಶದ ನ್ಯಾಯಿಕ ವ್ಯವಸ್ಥೆ ಗೌರವಿಸುತ್ತೇವೆ. ನ್ಯಾಯ ಸ್ಥಾನದಿಂದ ಅನ್ಯಾಯಕ್ಕೆ ಅವಕಾಶವಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.
No question of CM Siddaramaiah resigning from CM post says DK Shivakumar. This is all the startagey of BJP to spoil the name of Congress he slammed.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm