ಬ್ರೇಕಿಂಗ್ ನ್ಯೂಸ್
24-09-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.24: ನಾನ್ಯಾವ ತಪ್ಪೂ ಮಾಡಿಲ್ಲ. ನಾನ್ಯಾಕೆ ರಾಜೀನಾಮೆ ಕೊಡಬೇಕು. ಯಾವುದೇ ಕಾರಣಕ್ಕು ರಾಜೀನಾಮೆ ಕೊಡುವುದಿಲ್ಲ. ಅವರು ಬೇಕಾದರೆ ಹೋರಾಟ ಮಾಡಿಕೊಳ್ಳಲಿ. ನನಗೆ ನೈತಿಕತೆ ಬಗ್ಗೆ ಪ್ರಶ್ನೆ ಮಾಡ್ತಾರಲ್ವಾ, ಅವರಿಗೆ ನೈತಿಕತೆ ಅನ್ವಯ ಆಗಲ್ವಾ.? ಕುಮಾರಸ್ವಾಮಿ ಬೇಲ್ ಮೇಲೆ ಇದ್ದಾರೆ. ಅವರಿಗೆ ನೈತಿಕತೆ ಇಲ್ವಾ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ. ಬಿಜೆಪಿ - ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧ ಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಹಾಗೂ ಜೆಡಿಎಸ್ ನವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಬಿಜೆಪಿಯವರು ಈ ಹಿಂದೆ ಹಣ ಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ. ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿ, ಬಿಎನ್‌ಎಸ್ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು. ನಾನು ತಪ್ಪು ಮಾಡಿಲ್ಲ. 17ಎ ಅಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಬಿಜೆಪಿಯವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ತಿಳಿಯಿರಿ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಹೇಳಿದರು.
Why should I resign if I haven’t committed any mistake says Siddaramaiah in muda scam case. The Karnataka High Court on Tuesday dismissed Chief Minister Siddaramaiah's petition challenging the legality of the Governor's nod to an investigation against him over alleged Mysuru Urban Development Authority (MUDA) land scam.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm