ಬ್ರೇಕಿಂಗ್ ನ್ಯೂಸ್
27-09-24 06:11 pm HK News Desk ಕರ್ನಾಟಕ
ಬೆಳಗಾವಿ, ಸೆ 27: ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಅವರ ಪಕ್ಷದವರೇ ಕೆಲಸ ಮಾಡಿದ್ದಾರೆ. ಅದು ಓಪನ್ ಸಿಕ್ರೇಟ್, ಯಾರು ಅಂತಾ ಜಗಜ್ಜಾಹೀರಾಗಿದೆ. ಪದೇ ಪದೆ ಅವರ ಹೆಸರು ತೆಗೆದುಕೊಳ್ಳಲ್ಲ. ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎನ್ನುವ ಮೂಲಕ ಇದರಲ್ಲಿ ಡಿಸಿಎಂ ಡಿ. ಕೆ ಶಿವಕುಮಾರ ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಆರೋಪ ಮಾಡಿದರು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರದಿಂದ ಕಡಿವಾಣ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಸಿಬಿಐ ತನಿಖೆಗೆ ಕಡಿವಾಣ ಹಾಕಲಿ, ನ್ಯಾಯಾಲಯ ಇದೆಯಲ್ಲ. ಸಿದ್ದರಾಮಯ್ಯ ವಿರುದ್ಧ ಎಫ್ಐಆರ್‌ಗೆ ನ್ಯಾಯಾಲಯ ಆದೇಶಿಸಿದೆ. ಈ ಹಂತದಲ್ಲಿ ಸಿಬಿಐಗೆ ಕಡಿವಾಣ ಹಾಕಿದ್ದು ಸಂಶಯ ಮೂಡುತ್ತದೆ. ಸಿಎಂ, ಡಿಸಿಎಂ ಮೇಲೆ ಗುರುತರ ಆರೋಪಗಳಿವೆ. ಸರ್ಕಾರದ ನಿರ್ಧಾರದ ಬಗ್ಗೆ ಕೋರ್ಟ್‌ನಲ್ಲಿ ಪ್ರಶ್ನಿಸಲು ಅವಕಾಶಗಳಿವೆ ಎಂದು ತಿರುಗೇಟು ನೀಡಿದರು.
ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂಬ ಚರ್ಚೆ ವಿಚಾರಕ್ಕೆ, 2028ಕ್ಕೆ 120-140 ಸ್ಥಾನ ಗೆಲ್ಲಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. 2028ಕ್ಕೆ ಪೂರ್ಣಪ್ರಮಾಣದ ಸರ್ಕಾರ ತರಲು ನಾವು ಪ್ರಯತ್ನಿಸುತ್ತಿದ್ದೇವೆ. ಸಿದ್ದರಾಮಯ್ಯ ರಾಜೀನಾಮೆ ವಿಚಾರದಲ್ಲಿ ನಮ್ಮ ಪಕ್ಷದ ನಿರ್ಣಯಕ್ಕೆ ನಾನು ಬದ್ಧನಿದ್ದೇನೆ. ಬಿಎಸ್‌ವೈ ವಿರುದ್ಧ ಈ ಹಿಂದೆ ಎಫ್ಐಆರ್ ಆದಾಗ ಸಿದ್ದರಾಮಯ್ಯ ಏನು ಹೇಳಿದ್ದರು. ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ದರು. ಬಿಎಸ್‌ವೈ ವಿಚಾರದಲ್ಲಿ ತಾವು ಹೇಗೆ ನಡೆದುಕೊಂಡಿದ್ದಿರಿ ಎಂಬುದನ್ನು ನೆನೆಪಿಸಿಕೊಳ್ಳಿರಿ ಎಂದು ಪ್ರಶ್ನಿಸಿದರು.
ರಾಜಕೀಯವಾಗಿ ನನಗಿಂತ ಜ್ಯೂನಿಯರ್:
ರಮೇಶ್ ಜಾರಕಿಹೊಳಿಯಂತಹ ನಾಯಕರು ಸಿದ್ಧಾಂತದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ವ್ಯಂಗ್ಯವಾಡಿರುವುದಕ್ಕೆ, ವಿಜಯೇಂದ್ರ ರಾಜಕೀಯವಾಗಿ ನನಗಿಂತ ಜ್ಯೂನಿಯರ್, ಅವರ ಹೇಳಿಕೆಗೆ ಉತ್ತರ ಕೊಡಲ್ಲ ಎಂದಷ್ಟೇ ಹೇಳಿದರು.
ಮಾಜಿ ಸಚಿವ ಈಶ್ವರಪ್ಪ ಮನೆಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದರ ಕುರಿತು ಮಾತನಾಡಿ, ಈಶ್ವರಪ್ಪ ಮನೆಯಲ್ಲಿ ನಡೆದ ಸಭೆಯಲ್ಲಿ ಯಾವುದೇ ರೀತಿ ವಿಶೇಷತೆ ಏನೂ ಇಲ್ಲ. ನಾನು ಮುಂಬೈನಿಂದ ಬೆಂಗಳೂರಿಗೆ ಬಂದ ತಕ್ಷಣವೇ ಯತ್ನಾಳ್ ಕಾಲ್ ಮಾಡಿದ್ದರು. ಈಶ್ವರಪ್ಪ ಮನೆಗೆ ಹೋಗಿ ಬರೋಣ ಎಂದು ಕರೆದರು. ಆದರೆ, ಅಂದು ಈಶ್ವರಪ್ಪ ಮನೆಗೆ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ. ರಾಜುಗೌಡ ಬಂದಿದ್ದು ಗೊತ್ತಾಗಿದ್ದರೆ ನಾನು ಒಳಗೆ ಹೋಗುತ್ತಿರಲಿಲ್ಲ ಎಂದರು.
Dk shivakumar behind the conspiracy to remove Siddaramaiah from CM post says Ramesh Jarkiholi.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm