ಬ್ರೇಕಿಂಗ್ ನ್ಯೂಸ್
28-09-24 01:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧವೂ ಕಾಂಗ್ರೆಸ್ ಸರ್ಕಾರ ಎಫ್ಐಆರ್ ಅಸ್ತ್ರ ಪ್ರಯೋಗಿಸಿದೆ. ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಅದನ್ನು ಉಲ್ಲೇಖಿಸಿ ಸಚಿವರ ರಾಜೀನಾಮೆ ಕೇಳಲು ಮುಂದಾಗಿದೆ.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಮತ್ತು ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧವೂ ಪ್ರಕರಣ ದಾಖಲಾಗಿದೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿಂತೆ ಶುಕ್ರವಾರ ಎಚ್‌ಡಿಕೆ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ್ದಾರೆ. ಇದೇ ವೇಳೆ, ಚುನಾವಣಾ ಬಾಂಡ್ ಖರೀದಿ ವಿಚಾರದಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನೀಡಿದ್ದು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರಿ ನಿರ್ದೇಶನಾಲಯ ಬಳಸಿಕೊಂಡು ಸಚಿವೆ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ವಿಜಯೇಂದ್ರ, ಮಾಜಿ ಅಧ್ಯಕ್ಷ ನಳಿನ್ ಕಟೀಲ್ ವಿರುದ್ಧ ಸುಲಿಗೆ ಆರೋಪದಲ್ಲಿ ತನಿಖೆಗೆ ಆದೇಶ ಮಾಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಅಯ್ಯರ್ ಎಂಬವರು ದಾಖಲಿಸಿರುವ ದೂರಿಗೆ ಸಂಬಂಧಿಸಿ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ಈ ಪ್ರಕರಣ ಕಾಂಗ್ರೆಸ್ ಪಾಲಿಗೆ ಪ್ರಖರ ಅಸ್ತ್ರವಾಗಿ ಪರಿಣಮಿಸಲಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಅವರು ರಾಜೀನಾಮೆ ಕೊಡುತ್ತಾರಾ? ಎಂದು ಸಿಎಂ ಸಿದ್ದರಾಮಯ್ಯ ಈಗ ಪ್ರಶ್ನಿಸಿದ್ದಾರೆ.
After the Mysore Lokayukta police filed an FIR against CM Siddaramaiah in connection with the Muda scam, the Congress government also used the FIR weapon against BJP and JDS leaders.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm