ಬ್ರೇಕಿಂಗ್ ನ್ಯೂಸ್
28-09-24 04:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಸಿದ್ದರಾಮಯ್ಯ ಅವರು ಇಂದು ಇರಬಹುದು, ನಾಳೆ ಇಲ್ಲದೆಯೂ ಇರಬಹುದು. ಆದರೆ ಕಾಂಗ್ರೆಸ್ ಪಕ್ಷ ಶಾಶ್ವತವಾಗಿರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಿದ್ದರಾಮಯ್ಯ ಬಿಕ್ಕಟ್ಟಿನಲ್ಲಿರುವ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರು ಈ ರೀತಿ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಅವರು, ಯಾರನ್ನೇ ಆಗಲಿ ವೈಯಕ್ತಿಕವಾಗಿ ಗುರಿ ಮಾಡಬಾರದು. ಸಿದ್ದರಾಮಯ್ಯ ವರ್ಚಸ್ಸಿಗೆ ಕಳಂಕ ಹಚ್ಚುವ ಮೂಲಕ ಕಾಂಗ್ರೆಸ್ ಪಕ್ಷಕ್ಕೂ ಹಾನಿ ಮಾಡುವುದು ಬಿಜೆಪಿ ಉದ್ದೇಶ. ಯಾರೇ ಆದರೂ ಇಂದು ಇರಬಹುದು, ನಾಳೆ ಬದಲಾಗಬಹುದು. ಆದರೆ, ಪಕ್ಷ ಮುಂದುವರಿಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
ಮುಡಾ ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿಲ್ಲ. ದೋಷಿ ಎಂದೂ ತೀರ್ಮಾನವಾಗಿಲ್ಲ. ಆದರೂ ಪ್ರತಿದಿನ ಈ ಕುರಿತೇ ಹೆಚ್ಚು ಚರ್ಚೆಯಾಗುತ್ತಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ಹಿಂದೆ ಗುಜರಾತ್‌ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾ ಹತ್ಯಾಕಾಂಡ ನಡೆದಿತ್ತು. ಆ ವೇಳೆ ಅವರು ರಾಜೀನಾಮೆ ನೀಡಿದ್ದರೇ? ಅಮಿತ್ ಷಾ ವಿರುದ್ಧವೂ ಹಲವು ಪ್ರಕರಣಗಳು ದಾಖಲಾಗಿದ್ದವು. ಅವರೂ ರಾಜೀನಾಮೆ ನೀಡಿರಲಿಲ್ಲ. ಬಿಜೆಪಿಯವರು ಯಾವುದೋ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ವ್ಯಕ್ತಿಯ ವರ್ಚಸ್ಸನ್ನು ಹಾಳು ಮಾಡುವ ಮೂಲಕ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟು ಮಾಡುವ ಹುನ್ನಾರಗಳನ್ನು ಬಿಜೆಪಿ ನಡೆಸಿದೆ. ಬಿಜೆಪಿಯ ಕೇಂದ್ರ ನಾಯಕರ ಗುರಿ ಕಾಂಗ್ರೆಸ್ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ್ಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
All-India Congress Committee (AICC) president Mallikarjun Kharge on Friday, while alleging that BJP is targeting Chief Minister Siddaramaiah in the MUDA case to damage Congress, clarified that the party will have to move on irrespective of Siddaramaiah being the CM.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm