ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am