ಬ್ರೇಕಿಂಗ್ ನ್ಯೂಸ್
02-10-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.2: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಹಿಂಪಡೆಯಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆಗೆ ಮುಂದಾಗಿರುವ ವಿಚಾರ ತಿಳಿಯುತ್ತಲೇ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್, ಮುಡಾ ಸೈಟ್ ಗಳನ್ನೇ ಹಿಂದಕ್ಕೆ ನೀಡಲು ಸೂಚಿಸಿದ್ದಾರೆ. ಇದಲ್ಲದೆ, ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೈಟ್ ಹಿಂದಕ್ಕೆ ನೀಡಿರುವ ವಿಚಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ.
ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್‌ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್‌ಗಳನ್ನು ಹಿಂದಕ್ಕೆ ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರ ಸರಿಯುವಂತೆ ಸಲಹೆ ನೀಡಿದ್ದಾರೆ.
Chief Minister Siddaramaiah’s wife Parvathi decided to surrender the 14 sites allotted to her by the Mysuru Urban Development Authority (MUDA) after senior counsel and former Union minister Kapil Sibal’s advice, according to sources.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm