ಬ್ರೇಕಿಂಗ್ ನ್ಯೂಸ್
03-10-24 12:00 pm Bangalore Correspondent ಕರ್ನಾಟಕ
ಬೆಂಗಳೂರು, ಅ.3: ಸಿದ್ದರಾಮಯ್ಯ ಮತ್ತು ಪಟಾಲಂ ಮುಡಾ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದಾರೆ. ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಪತ್ರ ನೀಡಿದ ಕೂಡಲೇ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮೂಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು. ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಒಂದೇ ದಿನ ಸಿಎಂ ಪತ್ನಿ ಪತ್ರ ಕೊಟ್ಟಿದ್ದು ಮತ್ತು ಅದನ್ನು ಸ್ವೀಕರಿಸಿ ಕ್ರಯ ಪತ್ರ ರದ್ದು ಮಾಡಿರುವುದು ನಡೆದಿದೆ. ಇವೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯಗಳ ಆದೇಶಗಳಿವೆ. ಹೀಗಿದ್ದೂ ಮೂಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಇಂತಹ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಎಂದು ಅವರು ಪ್ರಶ್ನಿಸಿದರು.
There is a systematic plot to destroy evidence and cover up the Mysuru Urban Development Authority (MUDA) scam, Union Minister for Heavy Industries and Steel H.D. Kumaraswamy has alleged. Speaking to the media before attending the Gandhi Jayanti event near the JD-S party office, Kumaraswamy made serious charges that Chief Minister Siddaramaiah, his close confidante Urban Development Minister Byrathi Suresh, Lokayukta officials, and MUDA authorities are involved in a coordinated effort to cover up the scam.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm