ಬ್ರೇಕಿಂಗ್ ನ್ಯೂಸ್
04-10-24 08:25 pm Bangalore Correspondent ಕರ್ನಾಟಕ
ಬೆಂಗಳೂರು, ಅ 04: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
Three engineering colleges in the city received an email claiming to alert them to a “Hydrogen-based IED” placed on their premises on Friday (October 4) afternoon. The police pressed the bomb detection and disposal squad and dog squads at the three locations, carried out extensive anti-sabotage checks and determined that the threats were a hoax.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm