ಬ್ರೇಕಿಂಗ್ ನ್ಯೂಸ್
08-10-24 10:08 pm HK News Desk ಕರ್ನಾಟಕ
ರಾಯಚೂರು, ಅ.8: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲೆಯ ಸಿಂಧನೂರು ನಗರದಲ್ಲಿಂದು ದಸರಾ ಉತ್ಸವ ಹಿನ್ನೆಲೆಯಲ್ಲಿ ರೈತ ದಸರಾ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರ ಇರುತ್ತದೆ. ಸಿಎಂ ಮುಂದುವರೆಯುತ್ತಾರೆ ಎಂದರು.
ಇದೇ ವೇಳೆ, ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಯಾಣದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನನಗೆ ಬಹಳ ಆತ್ಮವಿಶ್ವಾಸವಿತ್ತು. ಜನ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ಎಲ್ಲಿ ಎಡವಿದ್ದೀವಿ ಎಂದು ಪರಿಶೀಲಿಸುತ್ತೇವೆ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು.
ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಮೇಲೆ ನಮಗೆ ವಿಶ್ವಾಸವಿತ್ತು. ಹರಿಯಾಣದಲ್ಲಿ ನಾವು ಗೆಲ್ಲಬೇಕಾಗಿತ್ತು. ಆದರೆ ಮತದಾರರ ತೀರ್ಪೇ ಅಂತಿಮ. ಹರಿಯಾಣದಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಕುರಿತು ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ನಾವು ಈಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.
ಇನ್ನು, ಎಕ್ಸಿಟ್ ಪೋಲನ್ನು ನಾನು ಯಾವತ್ತುೂ ನಂಬಿಲ್ಲ, ಮುಂದೆಯೂ ನಂಬಲ್ಲ ಎಂದು ತಿಳಿಸಿದರು. ಇದೇ ವೇಳೆ, ರಾಜ್ಯದಲ್ಲಿನ ಮೂರು ಉಪಚುನಾವಣೆ ಕ್ಷೇತ್ರಗಳಿಗೆ ಶೀಘ್ರದಲ್ಲೇ ಟಿಕೆಟ್ ಫೈನಲ್ ಮಾಡುತ್ತೇವೆ ಎಂದು ಹೇಳಿದರು.
Deputy Chief Minister DK Shivakumar said that there will be no change of Chief Minister in the state. He was speaking to reporters after inaugurating Raita Dasara on the occasion of Dussehra festival in Sindhanur city of the district.
04-05-25 09:15 pm
HK News Desk
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm