ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm