ಬ್ರೇಕಿಂಗ್ ನ್ಯೂಸ್
17-10-24 12:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಕೆಎಫ್.ಡಿ (ಮಂಗನ ಕಾಯಿಲೆ) ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ವಿತ್ತೀಯ ನೆರವು ಒದಗಿಸುವಂತೆ ಕೋರಿದರು.
ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಭೇಟಿ ವೇಳೆ ರಾಜ್ಯದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜು ಮಕ್ಕಳನ್ನ ರಕ್ತಹೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ರಕ್ತಹೀನತೆ ಮುಕ್ತ ಭಾರತ್ 2.O ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು.
ರಾಜ್ಯದಲ್ಲಿ ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ನವೀನ ತಂತ್ರಜ್ಞಾನಗಳ ಬಗ್ಗೆ ಆಸಕ್ತಿ ತೋರಿದ ICMR ನಿರ್ದೇಶಕರು, ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನ ದೇಶದ ಇತರ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ICMR ನಿರ್ದೇಶಕರು ಸಚಿವರಿಗೆ ತಿಳಿಸಿದರು. ಆರೋಗ್ಯ ಸೇವೆಗಳ ಉತ್ತಮ ವಿತರಣೆಗಾಗಿ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪರಸ್ಪರ ಸಹಕರಿಸುವ ನಿಟ್ಟಿನಲ್ಲಿ ಭೇಟಿ ವೇಳೆ ಚರ್ಚೆ ನಡೆಸಲಾಯಿತು. ಸಚಿವರ ಜೊತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, NHM ಎಂ.ಡಿ ನವೀನ್ ಭಟ್ ಉಪಸ್ಥಿತರಿದ್ದರು.
Karnataka Health Minister Dinesh Gundu Rao met with Indian Council of Medical Research’s (ICMR) Director General D. Rajiv Bahl in New Delhi to discuss the progress of the vaccine for Kyasanur Forest Disease (KFD), also known as the monkeypox or monkey fever
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm