ಬ್ರೇಕಿಂಗ್ ನ್ಯೂಸ್
24-10-24 07:44 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಸಿಎಂ ಭೇಡಿ ನೀಡಿದ್ದು, ಸಚಿವ ಬೈರತಿ ಸುರೇಶ್ ಕೂಡ ಸಾಥ್ ನೀಡಿದ್ದಾರೆ. ಅನುಮತಿ ಪಡೆಯದೆ ಕಟ್ಟುತ್ತಿರುವ ಕಟ್ಟಡವನ್ನ ಕೂಡಲೇ ನಿಲ್ಲಿಸಲು ಸಿಎಂ ಸೂಚನೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ರೂ. ಹಾಗೂ ಪಾಲಿಕೆಯಿಂದ ಮೂರು ತಲಾ ಲಕ್ಷ ರೂ. ಪರಿಹಾರ ಕೂಡಲೇ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನಿನ್ನೆ ಇರಲಿಲ್ಲ, ವಯನಾಡಿಗೆ ಹೋಗಿದ್ದೆ. ಗಾಯಗೊಂಡಿರುವವರಿಗೆ ಸರ್ಕಾರ ಆಸ್ಪತ್ರೆಯ ಖರ್ಚು ಭರಿಸುತ್ತದೆ. ಮೃತರ ಶವಗಳನ್ನು ಕಳಿಸಿಕೊಡುವ ಕೆಲಸ ಕೂಡ ಮಾಡಲಾಗುತ್ತದೆ ಎಂದು ಹೇಳಿದರು.
ಅನುಮತಿ ಪಡೆಯದೆ ಕಟ್ಟಿರುವ ಕಟ್ಟಡ ಇದು. ನೋಟಿಸ್ ನೀಡಿದರೂ ಕಟ್ಟಡ ಕಟ್ಟಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಜೋನಲ್ ಐಎಎಸ್ ಅಧಿಕಾರಿ ಹಾಗೂ ಎಕ್ಸ್ಯೂಟಿವ್ ಎಂಜಿನಿಯರ್‌ಗೆ ನೋಟಿಸ್ ಕೊಡಲು ಸೂಚಿಸಲಾಗಿದೆ ಎಂದರು.
ಕಟ್ಟಡ ನಿರ್ಮಿಸುವವರು ಅನುಮತಿ ಪಡೆದು ಕಟ್ಟಬೇಕು. ಅನುಮತಿ ಪಡೆಯದೇ ಕಟ್ಟಡ ಕಟ್ಟಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳೇ ಜವಾಬ್ದಾರಿ ಹೊರಬೇಕಾಗುತ್ತದೆ. ನೋಟಿಸ್ ಕೊಟ್ಟರೂ ಕಟ್ಟಡ ಕಟ್ಟಿದ್ದಕ್ಕೆ ಈ ಘಟನೆ ಸಂಭವಿಸಿದೆ. ಇದು ಮಳೆಯಿಂದ ಬಿದ್ದಿರುವ ಕಟ್ಟಡ ಅಲ್ಲ. ಕಳಪೆ ಕಾಮಗಾರಿಯಿಂದ ಬಿದ್ದಿರುವ ಕಟ್ಟಡ ಎಂದು ಹರಿಹಾಯ್ದರು.
ಇನ್ನು ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಚೇರಿ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ. "ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರಿಗೆ ತಲಾ 2ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ‘‘ ಎಂದು ಹೇಳಿದ್ದಾರೆ.
ಬಾಬುಸಾಪಾಳ್ಯದಲ್ಲಿ ಕುಸಿದು ಬಿದ್ದ ನಿರ್ಮಾಣದ ಹಂತದ ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದ ಅರ್ಮಾನ್, ಮೊಹಮ್ಮದ್ ಸಾಹಿಲ್, ಸೋಲೋ ಪಾಸ್ವಾನ್, ಶ್ರೀರಾನ್ ಕಿರುಪಾಲ್. ತಮಿಳುನಾಡು ಮೂಲದ ಮಣಿಕಂಠನ್, ಸತ್ಯರಾಜು ಮತ್ತು ಆಂಧ್ರಪ್ರದೇಶ ಮೂಲದ ತುಳುಸಿರೆಡ್ಡಿ ಮತ್ತು ಉತ್ತರ ಪ್ರದೇಶ ಮೂಲದ ಪುಲ್ಚನ್ ಯಾದವ್ ಮೃತರು.
ಕಟ್ಟಡ ಕುಸಿತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ಮನೆ ಮಾಲೀಕನ ಪುತ್ರ ಭುವನ್ ಗೌಡ, ಕಟ್ಟಡದ ಮೇಲ್ವಿಚಾರಕರಾಗಿದ್ದ ಮೋಹನ್ ರೆಡ್ಡಿ, ಏಳುಮಲೈ ಎಂಬುವರನ್ನ ಬಂಧಿಸಿದ್ದಾರೆ. ಕಟ್ಟಡದ ನಾಲ್ಕನೇ ಅಂತಸ್ತಿನವರೆಗೂ ಉಸ್ತುವಾರಿ ವಹಿಸಿಕೊಂಡಿದ್ದ ಮುನಿಯಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ ನಾಪತ್ತೆಯಾಗಿದ್ದು, ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರಂತ ಸ್ಥಳಕ್ಕೆ ಲೋಕಾಯುಕ್ತರ ಭೇಟಿ:
ದುರಂತ ಸಂಬಂಧ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಸ್ಥಳಕ್ಕೆ ಭೇಟಿ ನಿರ್ಲಕ್ಷ್ಯವಹಿಸಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದುರ್ಘಟನೆಯಲ್ಲಿ 8 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಕಾರಣ ಯಾರು? ಆಗಿದ್ದೇಗೆ ಎಂಬುದರ ಬಗ್ಗೆ ತನಿಖೆಯಾಗಬೇಕು ಎಂದರು.
ಅವಘಡದ ಬಗ್ಗೆ ಸುಮೊಟೋ ಕೇಸ್ ದಾಖಲಿಸಿಕೊಳ್ಳಲಾಗಿದೆ. ಅನುಮತಿ ಪಡೆದುಕೊಳ್ಳದೆ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗುತಿತ್ತು. 2 ವರ್ಷಗಳಿಂದ ಕಟ್ಟಡ ಕಟ್ಟುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಪ್ರಶ್ನಿಸಿರಲಿಲ್ಲ. ನಾಲ್ಕು ಅಂತಸ್ತಿನ ಮಹಡಿ ನಿರ್ಮಿಸುವರೆಗೂ ನೋಟಿಸ್ ಕೊಟ್ಟಿಲ್ಲ. ಪರಿಶೀಲನೆ ವೇಳೆ ಅಧಿಕಾರಿಗಳ ಲೋಪ ಕಂಡುಬಂದಿದೆ. ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.
Bangalore building collapse, CM announces 5 lakhs compensation, PM Modi 2 lakhs, death toll raises to eight. The death toll from the building collapse in Bengaluru’s Babusapalya has risen to eight, with six more bodies recovered during the ongoing search and rescue efforts. The incident occurred on October 22, during heavy rainfall, trapping 21 labourers from Bihar, Andhra Pradesh, and Karnataka in the rubbles. CCTV footage shows the building’s first floor collapsing and the entire six-story structure falling apart.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm