ಬ್ರೇಕಿಂಗ್ ನ್ಯೂಸ್
24-10-24 08:52 pm HK News Desk ಕರ್ನಾಟಕ
ಹಾವೇರಿ, ಅ.24: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತನ್ನ ಅಫಿಡವಿಟ್ ನಲ್ಲಿ 16.17 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ.
ಭರತ್ ಬೊಮ್ಮಾಯಿ ತನ್ನ ಕೈಯಲ್ಲಿ 2.03 ಲಕ್ಷ ರೂ. ನಗದು ಹಣ ಹೊಂದಿದ್ದಾಗಿ ಹೇಳಿಕೊಂಡಿದ್ದು ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 1.19 ಕೋಟಿ ಹೊಂದಿದ್ದಾರೆ.
ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ , ಖಾಸಗಿ ಕಂಪನಿಗಳಲ್ಲಿ 50 ಸಾವಿರ, ಪಾಲುದಾರಿಕೆ ಕಂಪನಿಯಲ್ಲಿ 1.23 ಕೋಟಿ ರು. ಬಂಡವಾಳ ತೊಡಗಿಸಿದ್ದಾರೆ.
ಗೋಲ್ಡ್ ಚಿಟ್ ಫಂಡ್‌ನಲ್ಲಿ 70 ಸಾವಿರ, ಮ್ಯೂಚುವಲ್ ಫಂಡ್‌ನಲ್ಲಿ 10.20 ಲಕ್ಷ ತೊಡಗಿಸಿದ್ದಾರೆ. ಇದಲ್ಲದೆ, 81.61 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಇನ್ನಿತರ ಆದಾಯ, ಬಡ್ಡಿ ಸೇರಿದಂತೆ ಒಟ್ಟು 3.79 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಭರತ್ ಬೊಮ್ಮಾಯಿ ತನ್ನ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ.
ಬೆಂಗಳೂರಿನ ಆರ್.ಟಿ.ನಗರದಲ್ಲಿ ಒಂದು ವಾಸದ ಮನೆ, ಬೆಂಗಳೂರಿನ ಸೆಂಚುರಿ ಎಥೋಸ್ ಅಪಾರ್ಟ್‌ಮೆಂಟ್‌ನಲ್ಲಿ ಪ್ಲಾಟ್ ಸೇರಿದಂತೆ 5.50 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಇಬ್ಬನಿ ಬಳಿ 1.43 ಲಕ್ಷ ನಗದು ಹಣ, ವಿವಿಧ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 56.32 ಲಕ್ಷ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 33 .75 ಲಕ್ಷ ಬಂಡವಾಳ ಹೂಡಿಕೆ ಮಾಡಿದ್ದಾರೆ. ಪಾಲುದಾರಿಕೆ ವ್ಯವಹಾರದಲ್ಲಿ 31.12 ಲಕ್ಷ ತೊಡಗಿಸಿದ್ದಾರೆ. ಪತ್ನಿಯ ಹೆಸರಿನಲ್ಲಿ ಮಾರುತಿ ಸ್ವಿಫ್ಟ್ ಕಾರು ಹೊಂದಿದ್ದಾರೆ. ಇವರಲ್ಲಿ 8.16 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 3.64 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ.
ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿ ಗ್ರಾಮದಲ್ಲಿ ಒಂದು ಸೈಟ್, ಕೆಂಗೇರಿಯಲ್ಲಿ ಕೆಎಚ್‌ಬಿ ನಿವೇಶನ ಇದೆ. ಸೆಂಚುರಿ ಎಥೋಸ್ ಅಪಾರ್ಟ್‌ಮೆಂಟ್‌ನಲ್ಲಿ ಪ್ಲಾಟ್ ಸೇರಿದಂತೆ 2.83 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪುತ್ರನ ಬಳಿ 40.47 ಲಕ್ಷ ಮೌಲ್ಯದ ಚರಾಸ್ತಿಯಿದೆ. ಒಟ್ಟಾರೆ ಭರತ್ ಬೊಮ್ಮಾಯಿ 16.17 ಕೋಟಿ ರು. ಮೌಲ್ಯದ ಆಸ್ತಿ ಹೊಂದಿದ್ದಾರೆ.
Six candidates, including the former Chief Minister Basavaraj Bommai’s son Bharath Bommai, filed their nomination papers for the byelections to Shiggaon Assembly Constituency on Thursday taking the total number of nomination papers filed to 21.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm