ಬ್ರೇಕಿಂಗ್ ನ್ಯೂಸ್
25-10-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.25 : ಹಳೇ ಪ್ರಕರಣದಲ್ಲಿ ಅರೆಸ್ಟ್ ವಾರೆಂಟ್ ಸಂಬಂಧಿಸಿ ಪೊಲೀಸರು ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಅವರ ಪುತ್ರನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು ಈ ವೇಳೆ ಪೊಲೀಸರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜ್ಞಾನಭಾರತಿ ಠಾಣೆ ಮಹಿಳಾ ಪಿಎಸ್‌ಐ ಸುರೇಖಾ ನೀಡಿದ ದೂರಿನ ಮೇರೆಗೆ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಆಕೆಯ ಪುತ್ರ ಆರವಿಂದ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಳೇ ಪ್ರಕರಣದ ವಾರೆಂಟ್ ಸಂಬಂಧಿಸಿ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಮಂಜೂರು ಮಾಡಿತ್ತು. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ಇಬ್ಬರಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಆರೋಪಿ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ವಿರುದ್ಧ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ ಪಿಎಸ್‌ಐ ಸುರೇಖಾ ಅವರು ಅ.23ರಂದು ಆರೋಪಿ ಲಕ್ಷ್ಮೀ ಜಿ. ಪ್ರಸಾದ್ ಬೆಂಗಳೂರು ವಿಶ್ವವಿದ್ಯಾಲಯದ ಕ್ವಾಟ್ರರ್ಸ್ ಬಳಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲು ಸಿದ್ಧತೆ ಮಾಡಿಕೊಳ್ಳುವಾಗ, ಆಕೆ ಏಕಾಏಕಿ 'ನನ್ನನ್ನು ಏಕೆ ಬಂಧಿಸುತ್ತೀರಿ' ಎಂದು ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿ ತಳ್ಳಾಡಿ ಕೈಗಳಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಬಳಿಕ ಆಕೆ ತನ್ನ ಮಗ ಅರವಿಂದ್ ಗೆ ಕರೆ ಮಾಡಿ ಠಾಣೆಗೆ ಕರೆಸಿಕೊಂಡಿದ್ದು ಇಬ್ಬರೂ ಸೇರಿ ಪೊಲೀಸರನ್ನು ನಿಂದಿಸಿದ್ದಾರೆ. ನ್ಯಾಯಾಲಯದ ಆದೇಶ ತೋರಿಸಿದರೂ ಕೇಳದ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ತಾನು ಹೈಕೋರ್ಟ್ ವಕೀಲ ಎಂದು ಅರವಿಂದ್ ಕೂಗಾಡಿದ್ದು ಪೊಲೀಸರ ವಶದಲ್ಲಿದ್ದ ಲಕ್ಷ್ಮೀ ಜಿ.ಪ್ರಸಾದ್ ಅವರನ್ನು ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಮಧ್ಯ ಪ್ರವೇಶಿಸಿದ ಇನ್‌ಸ್ಪೆಕ್ಟರ್ ರವಿ ಅವರಿಗೂ ಆರೋಪಿಗಳು ಕೈಗಳಿಂದ ಹಲ್ಲೆ ಮಾಡಿ ಪರಚಿ ಗಾಯಗೊಳಿಸಿದ್ದಾರೆ. ಠಾಣಾ ಸಿಬ್ಬಂದಿಗೂ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Writer Lakshmi G Prasad arrested over assult on police in Bangalore. Police had reached her house with warrant after which she assulted them and later has been arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm