ಬ್ರೇಕಿಂಗ್ ನ್ಯೂಸ್
30-10-24 02:02 pm Bangalore Correspondent ಕರ್ನಾಟಕ
ಬೆಂಗಳೂರು, ಅ 30: ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ವೇಳೆ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾಕಿರುವ ಕೃತ್ಯವು ಸ್ಯಾಟೆಲೈಟ್ ಚಿತ್ರಗಳಿಂದ ಬಯಲಾಗಿದೆ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ.
ಈ ಬಗ್ಗೆ ಮಂಗಳವಾರ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. " ಎಚ್ ಎಂ ಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ " ಎಂದಿದ್ದಾರೆ.

ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಖಂಡ್ರೆ ಹೇಳಿದ್ದಾರೆ.
ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಒಂದು ಹಳ್ಳಿ ರೀತಿ ಸೆಟ್ ನಿರ್ಮಿಸಿ ಕಳೆದೆರಡು ತಿಂಗಳಿನಿಂದ ಶೂಟಿಂಗ್ ಆಗುತ್ತಿದೆ ಎನ್ನಲಾಗಿದೆ. ಪೀಣ್ಯ ಪ್ಲಾಂಟೇಷನ್ 599 ಎಕರೆ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ಆಗ್ತಿದೆ. ಈ ಜಾಗವನ್ನು 1950ರಲ್ಲಿ ಡಿನೋಟಿಫಿಕೇಷನ್ ಮಾಡದೇ ದಾನ ಮಾಡಲಾಗಿದೆ ಎನ್ನಲಾಗಿದೆ. ಹೆಚ್ ಎಂಟಿ ಸಂಸ್ಥೆಗೆ ದಾನ, ಮಂಜೂರು ಹೆಸರಿನಲ್ಲಿ ಹಸ್ತಾಂತರ ಆಗಿದ್ದು ಹೆಚ್ ಎಂಟಿ ವಶದಲ್ಲಿರುವ ಜಾಗವೇ ಅರಣ್ಯ ಪ್ರದೇಶ ಎನ್ನಲಾಗಿದೆ.
ಎಚ್ ಎಂಟಿ ವಿವಿಧ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ, ಖಾಸಗಿ ವ್ಯಕ್ತಿಗಳಿಗೆ ಮಾರಾಟ ಆಗಿದ್ದು, ಹೆಚ್ ಎಂಟಿ 20ಕ್ಕೂ ಹೆಚ್ಚು ಎಕರೆ ಕೆನರಾ ಬ್ಯಾಂಕ್ ಮಾರಾಟ ಆಗಿದೆ ಎನ್ನಲಾಗಿದೆ. ಈ ಜಾಗದಲ್ಲಿ ಟಾಕ್ಸಿಕ್ ಸಿನಿಮಾ ಚಿತ್ರೀಕರಣ ಮಾಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘನೆ ಆಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಮೇಲ್ನೋಟಕ್ಕೆ ಅರಣ್ಯ ಪ್ರದೇಶ ನಾಶವಾಗಿದೆ. ತನಿಖೆ ಮಾಡಿ ಕ್ರಮಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ಆಗಿದೆ ಎನ್ನಲಾಗಿದೆ.
ಕಳೆದ ಒಂದು ತಿಂಗಳ ಹಿಂದೆ ಟಾಕ್ಸಿಕ್ ಸೆಟ್ ಜಾಗಕ್ಕೆ ಬಿಬಿಎಂಪಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದರು. ಸೆಟ್ ಪರ್ಮನೆಂಟ್ ಸ್ಟ್ರಕ್ಚರ್ ಅಥವಾ ತಾತ್ಕಾಲಿಕವಾ ಎಂದು ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ. ಟಾಕ್ಸಿಕ್ ತಂಡ ಇದು ತಾತ್ಕಾಲಿಕ ಸೆಟ್ ಎಂದು ಪತ್ರದ ಮೂಲಕ ಉತ್ತರ ನೀಡಿತ್ತು. ಶೂಟಿಂಗ್ ಮುಗಿದ ನಂತರ ಸೆಟ್ ತೆಗೆಯುತ್ತೇವೆ ಎಂದು ಬಿಬಿಎಂಪಿಗೆ ತಂಡ ಪತ್ರ ಬರೆದಿತ್ತು ಎನ್ನಲಾಗಿದೆ.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಅಂತ ಖಂಡ್ರೆ ಹೇಳಿದ್ದಾರೆ.
ನಟ ಯಶ್‌ಗೆ ಬಿಸಿ ಮುಟ್ಟಿಸಿದ ಟ್ರೋಲರ್ಸ್ ;
ಇನ್ನು ಸಚಿವ ಈಶ್ವರ್ ಖಂಡ್ರೆ, ಟಾಕ್ಸಿಕ್ ಸಿನಿಮಾ ತಂಡದ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿಯೂ ಅರಣ್ಯ ಪ್ರದೇಶದ ಸ್ಯಾಟಲೈಟ್ ಫೋಟೋ ಹಂಚಿಕೊಂಡಿದ್ದರು. ಒಂದರಲ್ಲಿ ಹಸಿರಾಗಿ ಇದ್ದ ಪ್ರದೇಶ, ಇನ್ನೊಂದು ಫೋಟೋದಲ್ಲಿ ಬರಡಾಗಿತ್ತು. ಇದು ವೈರಲ್ ಆಗುತ್ತಿದ್ದಂತೆ, ಪರಿಸರ ಪ್ರೇಮಿಗಳು, ನೆಟ್ಟಿಗರು ಚಿತ್ರತಂಡದ ವಿರುದ್ಧ ಕಿಡಿ ಕಾರುತ್ತಿದ್ದಾರೆ. "ಸಿನಿಮಾ ಶೂಟಿಂಗ್ ಸಲುವಾಗಿ ಕಾಡು ನಾಶ ಮಾಡುವುದು ಎಷ್ಟು ಸರಿ?" ಎಂದು ಕೊಂಚ ಗರಂ ಆಗಿದ್ದಾರೆ.
ಗಡ್ಡ ಬೆಳೆಸಿದಷ್ಟು ಸುಲಭ ಅಲ್ಲ ;
ಇನ್ನು ಕೆಲವರು ನಟ ಯಶ್ ಅವರನ್ನೂ ಗುರಿಯಾಗಿಸಿಕೊಂಡು, ಕಾಮೆಂಟ್ ಮಾಡುತ್ತಿದ್ದಾರೆ. ‘ಗಡ್ಡ ಬೆಳೆಸಿದಷ್ಟು ಈಸಿ ಅಲ್ಲ ಗುರು ಮರ ಬೆಳೆಸೋದು’ ಎಂದೂ ನಟ ಯಶ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಪ್ರಕರಣದಲ್ಲಿ ಇಡೀ ತಂಡವನ್ನೇ ಬಂಧಿಸಬೇಕು. ಕಡಿದಷ್ಟು ಮರವನ್ನೂ ನೆಡಬೇಕು ಎಂದೂ ಕಾಮೆಂಟ್ ಮಾಡುತ್ತಿದ್ದಾರೆ.
Karnataka Forest Minister Eshwar Khandre on Tuesday directed officials concerned to take disciplinary action against those who permitted felling of trees in a forest land here, where a set was erected for shooting a Kannada movie titled 'Toxic'.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm