ಬ್ರೇಕಿಂಗ್ ನ್ಯೂಸ್
10-11-24 09:47 pm Bangalore Correspondent ಕರ್ನಾಟಕ
ಬೆಂಗಳೂರು, ನ.10: 2019ರಲ್ಲಿ ಕೋವಿಡ್ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆಂದು ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ಹಾ ನೇತೃತ್ವದ ಆಯೋಗ ನೀಡಿರುವ ಮಧ್ಯಂತರ ವರದಿಯನ್ನು ಆಧರಿಸಿ ಬಿಜೆಪಿ ಸರ್ಕಾರದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಆಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಇಡಿ ತನಿಖೆ ಮೂಲಕ ಬಿಗಿಗೊಳಿಸುತ್ತಿರುವಾಗಲೇ ಪ್ರತಿಪಕ್ಷ ಬಿಜೆಪಿಯನ್ನು ಕಟ್ಟಿಹಾಕಲು ಹೊಸ ಅಸ್ತ್ರ ಹೆಣೆದಿದೆ.
ಕೋವಿಡ್ ಕಾಲದ ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇರವಾಗಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ನ್ಯಾ. ಡಿಕುನ್ಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ವರದಿ ಆಧಾರದಲ್ಲಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ''ನ್ಯಾ. ಕುನ್ಹಾ ವರದಿಯಲ್ಲಿ ಯಡಿಯೂರಪ್ಪ ಮತ್ತು ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಣಯ ಮಾಡಲಾಗುವುದು ಎಂದಿದ್ದಾರೆ. ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಲಿದೆ. ಆತುರದ ನಿರ್ಧಾರಗಳಿಂದ ತಪ್ಪಿತಸ್ಥರು ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತರುವ ಸಾಧ್ಯತೆಯಿದೆ. ಕೋವಿಡ್ ಸಂದರ್ಭದಲ್ಲಿ ಅಕ್ರಮ ಎಸಗಿದವರನ್ನು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಗುಂಡೂರಾವ್ ಹೇಳಿದರು.
ಕೋವಿಡ್ ಅಕ್ರಮಗಳ ಕುರಿತಂತೆ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ಹಿರಿಯ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ತಿಳಿಸಿದರು. ಅಂದಾಜಿನ ಪ್ರಕಾರ 10 ರಿಂದ 15 ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ತನಿಖಾ ಸಮಿತಿ ಆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರಬಹುದು. ಇದನ್ನು ಸಂಪುಟ ಉಪಸಮಿತಿ ಪರಾಮರ್ಶಿಸಲಿದೆ ಎಂದು ಹೇಳಿದ್ದಾರೆ.
ಪಿಪಿಇ ಕಿಟ್ ಖರೀದಿಯಲ್ಲಿ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅಕ್ರಮ ಎಸಗಿದ್ದಾರೆ. ದೇಶದ ಮಾರುಕಟ್ಟೆಯಲ್ಲಿ ಪಿಪಿಇ ಕಿಟ್ ಬೆಲೆ 330 ರೂ. ಇದ್ದರೂ, ಚೀನಾ ಕಂಪನಿಯಿಂದ 2,104 ರೂ. ದುಬಾರಿ ಬೆಲೆಗೆ ಖರೀದಿಸಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 14 ಕೋಟಿ ರೂ. ನಷ್ಟವಾಗಿದೆ. ಆಯೋಗವು 1,500 ಪುಟಗಳ ಮಧ್ಯಂತರ ವರದಿ ನೀಡಿದೆ. ಹಲವು ಪ್ರಕರಣಗಳಲ್ಲಿ ಕಂಪನಿಗಳಿಂದ ಹಣ ರಿಕವರಿ ಮಾಡುವಂತೆ ವರದಿಯಲ್ಲಿ ಸೂಚಿಸಲಾಗಿದೆ.
The Justice Michael D’Cunha Commission has recommended that BJP leaders BS Yediyurappa and B Sreeramulu be prosecuted for allegedly abusing their influence during their tenures as Chief Minister and Health Minister, respectively, for alleged irregularities in the procurement of PPE kits in April 2020.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm