ಬ್ರೇಕಿಂಗ್ ನ್ಯೂಸ್
13-11-24 07:07 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದ್ದು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ ನೀಡಿದೆ.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ. 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಹೇಳಿದೆ. ಇದರಂತೆ, ಆರೋಪಿಗಳು ನ.14ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ತಮ್ಮ ಶಿಕ್ಷೆ ರದ್ದು ಪಡಿಸುವಂತೆ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈನ್ಸ್ ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಾಡಿದ್ದು ಸದ್ಯಕ್ಕೆ ಶಿಕ್ಷೆಯನ್ನು ತತ್ಕಾಲಕ್ಕೆ ಅಮಾನತುಗೊಳಿಸಿದೆ.
ಅಂಕೋಲಾ ತಾಲೂಕಿನ ಬೇಲೆಕೇರಿಯಲ್ಲಿ 2009- 2010ರಲ್ಲಿ ಅರಣ್ಯಾಧಿಕಾರಿಗಳು 200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್ ಬಿಳಿಯ ಅವರ ಸುಪರ್ದಿಗೆ ನೀಡಲಾಗಿತ್ತು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸೇರಿ ಅದಿರನ್ನು ಕಳವುಗೈದು ಮಾರಾಟ ಮಾಡಿದ್ದರು.
Illegal export of seized iron case, Satish Sail gets stay on imprisonment. Mr. Sail and a few other convicts, who have also filed appeals against their conviction, have pleaded with the court to suspend their sentence and enlarge them on bail during the pendency of their appeals.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 09:12 pm
Mangalore Correspondent
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm