ಬ್ರೇಕಿಂಗ್ ನ್ಯೂಸ್
26-11-24 06:56 pm Bangalore Correspondent ಕರ್ನಾಟಕ
ಬೆಂಗಳೂರು, ನ.26: ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಕಾರಣಕ್ಕೆ ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸಿನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವಲ್ಲಿ ಪರಿಣಾಮ ಬೀರಿವೆ. ಆದರೂ ಉಪ ಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ. ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತ ಆಗಿದೆ ಎಂದು ಭಾವಿಸೋಣ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಉಪ ಚುನಾವಣೆ ಸೋಲಿನ ಬಳಿಕ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಕಾರ್ಯಕರ್ತರನ್ನುದ್ದೇಶಿಸಿ ಸುದೀರ್ಘ ಪತ್ರ ಬರೆದಿದ್ದು, ''ಉಪ ಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆಯ ಸಾಮರ್ಥ್ಯ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತವೆ ಎಂದಿದ್ದಾರೆ.
ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಅಧಿಕಾರದ ಬೆನ್ನು ಹತ್ತಿ ರಾಜಕಾರಣ ಮಾಡುವುದಕ್ಕಾಗಿ ಜನ್ಮ ತಾಳಿದ್ದಲ್ಲ. ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ. ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಯ ಪ್ರತಿ ಹಂತವೂ ಚಾರಿತ್ರಿಕ ದಾಖಲೆಗಳಾಗಿವೆ. ಪಕ್ಷದ ಕಾರ್ಯಕರ್ತರಾಗಿ ನಾವೆಲ್ಲರೂ ಹೆಮ್ಮೆ ಪಡುವ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಹೆಬ್ಬಾಗಿಲು ತೆರೆದು ಕೊಟ್ಟ ರಾಜ್ಯ 'ಕರ್ನಾಟಕ'ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತದೊಂದಿಗೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿಕೊಂಡು ರಾಜ್ಯದ ಗೌರವವನ್ನು ರಾಷ್ಟ್ರೀಯ ಮಟ್ಟದಲ್ಲಿ ಕುಗ್ಗಿಸಿದೆ.
ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬ್ಯಾಂಕಿನ ಖಾತೆಗೆ ಕನ್ನ ಹಾಕಿ ಲಪಟಾಯಿಸಿದ ಪ್ರಕರಣ ದೇಶದ ಇತಿಹಾಸದಲ್ಲಿಯೇ ಮೊದಲು. ವಕ್ಫ್ ಕಾಯ್ದೆ ಹೆಸರಿನಲ್ಲಿ ರೈತರು, ಮಠಮಾನ್ಯಗಳು ಹಾಗೂ ದೇವಸ್ಥಾನಗಳ ಆಸ್ತಿ ಆಕ್ರಮಿಸಲು ಕಠೋರ ನಿಲುವಿನ ಅಸ್ತ್ರ ಬಳಸಿದ್ದು ಇದೇ ಮೊದಲು. ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿ ಕಡು ಬಡವರ ಅನ್ನದ ತಟ್ಟೆಯನ್ನು ನಿರ್ದಯವಾಗಿ ಸರ್ಕಾರ ಕಿತ್ತುಕೊಳ್ಳಲು ಹೊರಟಿದ್ದೇಕೆ?''
ತಾವು ತಪ್ಪೇ ಮಾಡದಿದ್ದರೆ 14 ನಿವೇಶನಗಳನ್ನು ಮುಡಾಗೆ ಒಪ್ಪಿಸಿದ್ದು ಯಾಕೆ? ಜೀವಂತ ಕಾನೂನು ವ್ಯವಸ್ಥೆಯಲ್ಲಿ ಮೂಡಾ ಹಗರಣ ತಾರ್ಕಿಕ ಅಂತ್ಯ ಕಾಣುವವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಕೆಲ ಮಂತ್ರಿಗಳು ಪ್ರಾಮಾಣಿಕತೆಯ ಬಗ್ಗೆ ಮಾತನಾಡುವ ನೈತಿಕತೆ ಹೊಂದಲು ಸಾಧ್ಯವೇ ಇಲ್ಲ. ಹಣ ಬಲ, ಅಧಿಕಾರ ಬಲದ ಜೊತೆಗೆ ಚುನಾವಣೆಯ ಹಿಂದಿನ ದಿನವನ್ನು ಗುರಿಯನ್ನಾಗಿಸಿಕೊಂಡು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತದಾರರ ಖಾತೆಗೆ ಹಾಕಿದ್ದು ಚುನಾವಣೆಯ ಅನೈತಿಕತೆಯಲ್ಲದೇ ಮತ್ತಿನ್ನೇನು? ದುರ್ಮಾರ್ಗಗಳನ್ನು ಬಳಸಿ ಉಪ ಚುನಾವಣೆಯನ್ನು ಗೆಲ್ಲುವುದು ಆಡಳಿತ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ. ಈ ನಿಟ್ಟಿನಲ್ಲಿ ಈ ಚುನಾವಣೆಯ ಅಪಜಯವನ್ನು ನಾವ್ಯಾರೂ ಹಿನ್ನೆಡೆ ಎಂದು ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವಿಜಯೇಂದ್ರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೆದ್ದ ನಂತರ ಸಾರ್ವತ್ರಿಕ ಚುನಾವಣೆಯಲ್ಲಿ ಯಾಕೆ ಧೂಳೀಪಟವಾಯಿತು ಎಂಬ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಬೇಕಾಗಿದೆ. ತಮ್ಮ ಭ್ರಷ್ಟತೆಯ ಕರಾಳ ಮುಖ ಒರೆಸಿಕೊಳ್ಳಲು ಉಪ ಚುನಾವಣೆ ಫಲಿತಾಂಶ ಯಾವುದೇ ಕಾರಣಕ್ಕೂ ವಸ್ತ್ರ ಆಗುವುದಿಲ್ಲ, ಅಸ್ತ್ರವೂ ಆಗುವುದಿಲ್ಲ. ಕಾಂಗ್ರೆಸ್ ಸರ್ಕಾರದ ಉಳಿದಿರುವ ಅವಧಿಯನ್ನು ಗಮನಿಸಿಯೂ ಜನರು ಕೆಲವು ನಿರೀಕ್ಷೆಗಳೊಂದಿಗೆ ಉಪ ಚುನಾವಣೆಯಲ್ಲಿ ಮತ ನೀಡಿರುವ ಸಾಧ್ಯತೆಯನ್ನೂ ನಾವು ಅಲ್ಲಗಳೆಯಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ಸಿಗರು ಉಪ ಚುನಾವಣೆಯ ಗೆಲುವಿಗಾಗಿ ತಮ್ಮ ಬೆನ್ನು ತಟ್ಟಿಕೊಂಡು ಸಂಭ್ರಮಿಸಬೇಕಾಗಿಲ್ಲ. ಅವರ ಮುಂದೆ ದೊಡ್ಡ ಜವಾಬ್ದಾರಿಯಿದೆ, ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಹಾದಿಯಲ್ಲಿ ಒಂದೇ ಒಂದು ಹೆಜ್ಜೆಯನ್ನೂ ಇಟ್ಟಿಲ್ಲ. ತಮ್ಮ ಗ್ಯಾರಂಟಿ ಯೋಜನೆಯನ್ನೂ ಸಮರ್ಪಕವಾಗಿ ನಿರ್ವಹಿಸಲಾಗದ ಸ್ಥಿತಿಯನ್ನು ಸರಿದೂಗಿಸಿಕೊಳ್ಳಲು ಇತರ ಅಭಿವೃದ್ಧಿ ಕಾರ್ಯಗಳಿಗೆ ಕಲ್ಲು ಹಾಕಿದ್ದಾರೆ.''
ಹತ್ತು ಹಲವು ಇಲಾಖೆಗಳು ಕೆಲಸವಿಲ್ಲದೇ ನಿಂತಲ್ಲೇ ನಿಂತಿವೆ. ಯುವಕರಿಗಾಗಿ ಉದ್ಯೋಗ ಸೃಷ್ಟಿಯಾಗಿಲ್ಲ, ರೈತರಿಗಾಗಿ ಯಾವುದೇ ಹೊಸ ನೀರಾವರಿ ಯೋಜನೆ ಆರಂಭವಾಗಲಿಲ್ಲ, ಮಹಿಳಾ ಉದ್ಯೋಗಕ್ಕಾಗಿ ಕಾರ್ಯಕ್ರಮ ರೂಪಿಸಲಿಲ್ಲ, ಶಿಕ್ಷಣ ಸುಧಾರಣೆಗಾಗಿ ಕನಿಷ್ಠ ಕಾರ್ಯಕ್ರಮವನ್ನೂ ರೂಪಿಸಲಿಲ್ಲ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಹಾಗೂ ಹಿಂದುಳಿದವರು, ಅತೀ ಹಿಂದುಳಿದವರು, ಆದಿವಾಸಿಗಳು ಹಾಗೂ ಅಲೆಮಾರಿ ಸಮುದಾಯಗಳ ವಿವಿಧ ಅಭಿವೃದ್ಧಿ ನಿಗಮಗಳ ಚಟುವಟಿಕೆಗಳಿಗೆ ಕನಿಷ್ಟ ಅನುದಾನವನ್ನೂ ನೀಡಿಲ್ಲ. ಇಷ್ಟಾಗಿಯೂ ಮೂರು ಉಪ ಚುನಾವಣೆಯ ಫಲಿತಾಂಶ ತಮ್ಮ ಸಾಧನೆ ಎಂದು ಬೀಗುತ್ತಿರುವ ಕಾಂಗ್ರೆಸ್ಸಿಗರು ಯಾವ ನೈತಿಕತೆಯಿಂದ ಈ ಜಯವನ್ನು ಸಂಭ್ರಮಿಸುತ್ತಾರೆಂದು ಈ ರಾಜ್ಯದ ಜನತೆಗೆ ತಿಳಿಸಬೇಕಿದೆ.''
ನಮ್ಮ ಭಾರತೀಯ ಜನತಾ ಪಾರ್ಟಿಯಲ್ಲಿ ಅಭಿಪ್ರಾಯ ಭೇದಗಳಿಗೆ ಮುಕ್ತ ಅವಕಾಶ ಇದ್ದೇ ಇದೆ. ಅದೇ ರೀತಿ ಶಿಸ್ತು, ಸಂಯಮಗಳು ಎಲ್ಲೆ ಮೀರದಂತೆ ನೋಡಿಕೊಳ್ಳುವ ವ್ಯವಸ್ಥೆಯೂ ನಮ್ಮಲ್ಲಿದೆ. ಈ ಕ್ಷಣಕ್ಕೂ ಪ್ರತಿಯೊಬ್ಬ ಕಾರ್ಯಕರ್ತರು, ಪ್ರಮುಖರು ಹಾಗೂ ಹಿರಿಯರೊಂದಿಗೆ ವಿಶ್ವಾಸ, ಪ್ರೀತಿಯನ್ನು ಬೆಳೆಸಿಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎನ್ನುವ ಸಂಕಲ್ಪ ನನ್ನದಾಗಿದೆ ಎಂದು ಬಿವೈ ವಿಜಯೇಂದ್ರ ಅವರು ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದು ಹುರಿದುಂಬಿಸುವ ಕೆಲಸ ಮಾಡಿದ್ದಾರೆ.
Take Maha win as inspiration, forget bypoll defeat says Karnataka BJP president Vijayendra. Vijayendra stated on Tuesday, "My humble request to party workers. The results of bye-elections in the state can't have any impact on the organisation of our party. We will completely ignore the outcome of bypolls.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 06:57 pm
Mangalore Correspondent
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm