ಬ್ರೇಕಿಂಗ್ ನ್ಯೂಸ್
01-12-24 10:04 pm HK News Desk ಕರ್ನಾಟಕ
ಗದಗ, ಡಿ.1: ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದ ಯುವಕನೊಬ್ಬ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾನೆ.
ಮೃತ ಜಗದೀಶ್ ಹಳೆಮನಿ (37) ನೇಣಿಗೆ ಶರಣಾಗಿದ್ದು ಶಿರಹಟ್ಟಿ ಮೂಲದ ನಿವಾಸಿಯಾಗಿದ್ದು, ವ್ಯಾಪಾರಸ್ಥನಾಗಿದ್ದ. ಹಲವಾರು ತಿಂಗಳಿಂದ ಆನ್‌ಲೈನ್ ಗೇಮ್ ನಲ್ಲಿ ಜಗದೀಶ್ ಮಗ್ನನಾಗಿದ್ದ. ರಮ್ಮಿ ಆನ್ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.
ನಿನ್ನೆ ರಾತ್ರಿ 10:30 ರ ಸುಮಾರಿಗೆ ಶಿರಹಟ್ಟಿ ಯಿಂದ ಗದಗ ವಿಶ್ವ ಲಾಡ್ಜ್ ಗೆ ಬಂದಿದ್ದಾನೆ. ಕಂಠ ಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದು ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ರಮ್ಮಿ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್‌ಲೈನ್ ಗೇಮ್ ಬ್ಯಾನ್ ಆಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನವಾದ್ರೂ ರೂಮ್ ನಿಂದ ಯುವಕ ಹೊರಬಂದಿರಲಿಲ್ಲ. ಲಾಡ್ಜ್ ನವರಿಗೆ ಅನುಮಾನ ಬಂದು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಗದಗ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Businessman from Gadag commit suicide after losing money in Rummy. A young man, upset after losing money playing an online game, committed suicide at a lodge and wrote a death note urging the government to ban the online game of rummy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm