ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am