ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm