ಬ್ರೇಕಿಂಗ್ ನ್ಯೂಸ್
25-12-24 10:10 pm HK News Desk ಕರ್ನಾಟಕ
ಬೆಳಗಾವಿ, ಡಿ.25: ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಖಾನಾಪುರ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿ ನಾಯಕರಿಗೆ ಠಾಣೆಯ ಒಳಗೆ ಬರಲು ಅವಕಾಶ ನೀಡಿದ್ದಕ್ಕಾಗಿ ಮಂಜುನಾಥ್ ನಾಯಕರನ್ನು ಅಮಾನತು ಮಾಡಿ ಬೆಳಗಾವಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಸಿಟಿ ರವಿಯನ್ನು ಬಂಧಿಸಿದ ನಂತರ, ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಬೆಳಗಾವಿ ಮತ್ತು ಬಾಗಲಕೋಟೆಯ ಹಲವು ಪ್ರದೇಶಗಳಲ್ಲಿ ರಾತ್ರಿಯಿಡೀ ಸುತ್ತಾಡಿಸಲಾಗಿತ್ತು. ಆ ವೇಳೆ, ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಒಳಬಿಟ್ಟ ತಪ್ಪಿಗೆ, ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ, ಐಜಿಪಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಐಜಿಪಿ ವಿಕಾಸ್ ಕುಮಾರ್, ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಬಂಧಿಸಲಾಗಿತ್ತು, ಅವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಶಿಫ್ಟ್ ಮಾಡಲಾಗಿತ್ತು. ಆ ವೇಳೆ, ಸೂಕ್ತ ಭದ್ರತೆಯನ್ನು ಒದಗಿಸಿ, ಯಾರನ್ನೂ ಯಾವುದೇ ಕಾರಣಕ್ಕೂ ಒಳಗೆ ಬಿಡದಂತೆ ಆದೇಶ ನೀಡಲಾಗಿತ್ತು. ಅದನ್ನು ಪಾಲಿಸಲಾಗಿಲ್ಲ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಆದೇಶದ ಹೊರತಾಗಿಯೂ, ಠಾಣೆಯಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿರಲಿಲ್ಲ. ಠಾಣೆಯ ಒಳಗೆ ರಾಜಕೀಯ ನಾಯಕರು ಬಲವಂತವಾಗಿ ಒಳಗೆ ಬಂದಿದ್ದರು. ಅಷ್ಟೇ ಅಲ್ಲದೇ, ಸಭೆಯನ್ನೂ ನಡೆಸಿದ್ದರು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಹಿನ್ನಲೆಯಲ್ಲಿ ಅಮಾನತಿನ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಅಮಾನತು ಆದೇಶವನ್ನು ಖಂಡಿಸಿ, ಬಿಜೆಪಿ ಬೆಳಗಾವಿ ಘಟಕದಿಂದ ಗುರುವಾರ ಡಿ.26ರಂದು ಖಾನಾಪುರ ಬಂದ್ ಗೆ ಕರೆ ನೀಡಿದೆ. ಬಿಜೆಪಿ ನೀಡಿರುವ ಬಂದ್ ಕರೆಗೆ, ಜೆಡಿಎಸ್ ಮತ್ತು ಹಲವು ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇದೇ ವಿಚಾರದಲ್ಲಿ ಬೆಳಗಾವಿಯಲ್ಲಿರುವ ಗೃಹ ಸಚಿವ ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ಅದು ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮಾಡಿದ್ದಾರೆ. ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದು ಅವರಿಗೆ ಗೊತ್ತಿರುವುದು. ಅದಕ್ಕೆ ಸರ್ಕಾರ ಇನ್ವಾಲ್ ಆಗುವುದಿಲ್ಲ. ಯಾವ ಸೂಚನೆಯನ್ನೂ ಕೊಡುವುದಿಲ್ಲ. ಇಲಾಖೆ ಹಂತದಲ್ಲಿ ಯಾವ ಲ್ಯಾಪ್ಸ್ ಇತ್ತು ಅವರಿಗೆ ಗೊತ್ತು. ಸ್ಪೆಸಿಫಿಕ್ ಆಗಿ ಅವರನ್ನೇ ಮಾಡಬೇಕು ಅಂದ್ರೆ ಯಾವ ಕಾರಣಕ್ಕೆ ಆಗಿದೆ ಗೊತ್ತಿಲ್ಲ ಎಂದಿದ್ದಾರೆ.
ಸಿಟಿ ರವಿ ಹಲ್ಲೆ ಆರೋಪಿ ಬಂಧನ ಆಗದ ಬಗ್ಗೆ ಕೇಳಿದ್ದಕ್ಕೆ, ಸಿಒಡಿ ತನಿಖೆಗೆ ಕೊಟ್ಟಿದ್ದೇವೆ. ಈಗ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ಮಾಧ್ಯಮದವರನ್ನ ಕೇಳಿ ಮಾಡಬೇಕಾ ಎಂದು ಮಾಧ್ಯಮದವರ ಮೇಲೆ ಪರಂ ಗರಂ ಆದರು.
Police Inspector of Khanapur station has been suspended for dereliction of duty by allegedly letting in political leaders and others inside the station while BJP MLC C T Ravi was in custody in connection with a case registered against him, officials said on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm