ಬ್ರೇಕಿಂಗ್ ನ್ಯೂಸ್
25-12-24 10:50 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 25: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಇಂದು ಲಕ್ಷ್ಮೀ ದೇವಿನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಮುಗಿಸಿ ಕಾರ್ಯಕರ್ತರೊಂದಿಗೆ ಹೊರಬರುವಾಗ ಅಪರಿಚಿತರು ಮೊಟ್ಟೆ ಎಸೆದಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಮುನಿರತ್ನ ಅವರನ್ನು ರಕ್ಷಣೆ ಮಾಡಿದ್ದಾರೆ. ಈ ಕೃತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮುನಿರತ್ನ "ಇಂದು ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಹಿನ್ನೆಲೆ ಕಾರ್ಯಕ್ರಮಕ್ಕಾಗಿ ಬಂದಿದ್ದೆ. ಅದನ್ನು ಮುಗಿಸಿ ಹೋಗುವಾಗ ದುಷ್ಕರ್ಮಿಗಳು ನನ್ನ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾರೆ. ಇದಕ್ಕೂ ಮುನ್ನ ಗುಪ್ತಚರ ವರದಿ ಪ್ರಕಾರ ನಿಮ್ಮ ಮೇಲೆ ಕೊಲೆಯತ್ನ ದಾಳಿ ನಡೆಯಲಿದೆ. ಹೀಗಾಗಿ ಕಾರಿನಲ್ಲಿ ಕುಳಿತುಕೊಳ್ಳಿ ಎಂದು ಸೂಚಿಸಿದ್ದರು. ಪೊಲೀಸರ ನಿರ್ದೇಶನದಂತೆ ಹೊರಬರುವಾಗ ಈ ಘಟನೆ ಸಂಭವಿಸಿದೆ" ಎಂದು ಹೇಳಿದರು.
"ಮೂರು ತಿಂಗಳ ಹಿಂದೆ ವಕೀಲರ ರೂಪದಲ್ಲಿ ಬಂದ ಅಪರಿಚಿತರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ನನ್ನ ಮೇಲೆ ಹಲ್ಲೆ ಯತ್ನ ನಡೆದಿತ್ತು. ಈ ಬಗ್ಗೆ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಎನ್ಐಎಗೆ ದೂರು ನೀಡಿದ್ದೇನೆ. ನನ್ನನ್ನ ಹತ್ಯೆ ಮಾಡಲು ಸಂಚು ರೂಪಿಸಿರುವುದು ಗೊತ್ತಾಗಿದೆ" ಎಂದು ಆರೋಪಿಸಿದರು.
ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ. ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ ನನ್ನನ್ನು ಹತ್ಯೆ ಮಾಡುತ್ತಿದ್ದರು. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಹನುಮಂತರಾಯಪ್ಪ ಸೇರಿದಂತೆ ಕೆಲವರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು ಆರೋಪವನ್ನು ತಳ್ಳಿಹಾಕಿದರು. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ 1924ರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿದರು. ಮುನಿರತ್ನ ಅವರು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಸುರೇಶ್ ಆರೋಪವನ್ನು ತಳ್ಳಿಹಾಕಿದರು. ಮತ್ತೊಂದೆಡೆ ಗೃಹ ಸಚಿವ ಪರಮೇಶ್ವರ ಅವರು ಪ್ರಕರಣ ಸಂಬಂಧ 'ಮೂವರನ್ನು ಬಂಧಿಸಲಾಗಿದೆ. ಅವರು ಯಾರು ಮತ್ತು ಯಾಕೆ ಹೀಗೆ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದರು.
ದಾಳಿ ಖಂಡಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ;
ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಖಂಡಿಸಿದ್ದಾರೆ. ಇಂತಹ ದಾಳಿ ಮುನಿರತ್ನಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅವಮಾನ. ಕಾಂಗ್ರೆಸ್ ಅಧಿಕಾರದಲ್ಲಿರುವ ಕಾರಣ. ಇಂತಹ ದಾಳಿಗಳು ನಡೆಯುತ್ತಿವೆ. ಸಾರ್ವಜನಿಕ ಪ್ರತಿನಿಧಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದು ವಿಜಯೇಂದ್ರ ಹೇಳಿದರು. ಅಷ್ಟೇ ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಸಿಟಿ ರವಿ ಕೂಡ ಘಟನೆಯನ್ನು ಖಂಡಿಸಿದ್ದಾರೆ.
ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪೊಲೀಸ್ ಪ್ರಕರಣಗಳನ್ನು ಎದುರಿಸುತ್ತಿರುವ ಮುನಿರತ್ನ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
In what triggered another political row, Rajarajeshwari Nagar MLA Munirathna was pelted with eggs after an event here on Wednesday. The police said that three persons had been detained in this connection.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am