ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm