ಬ್ರೇಕಿಂಗ್ ನ್ಯೂಸ್
03-01-25 08:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಒಟ್ಟು ಕಾಮಗಾರಿ ಮತ್ತು ಅದರ ವೆಚ್ಚಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಬೈರತಿ ಸುರೇಶ್ ಸೂಚಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ ವಿಧಾನಸೌಧದ ಕಚೇರಿಯಲ್ಲಿ ನಡೆಸಿದರು. ಇಲ್ಲಿಯವರೆಗೆ ರಾಜ್ಯದ 7 ಸ್ಮಾರ್ಟ್ ಸಿಟಿಗಳಲ್ಲಿ ರೂ. 6415.51 ಕೋಟಿ ವೆಚ್ಚದ ಕೆಲಸ ನಡೆದಿದ್ದು, ಕಾಮಗಾರಿ ತೃಪ್ತಿದಾಯಕವಾಗಿಲ್ಲವೆಂದು ತಿಳಿದು ಬಂದ ಕಾರಣ ಬೆಂಗಳೂರು ಹೊರತುಪಡಿಸಿ (ರೂ. 877.82 ಕೋಟಿ ರೂ.ಗಳ ಕಾಮಗಾರಿ ಬೆಂಗಳೂರು ಸ್ಮಾರ್ಟ್ ಸಿಟಿಯಲ್ಲಿ ಪೂರ್ಣಗೊಂಡಿದ್ದು) ಇತರೇ 6 ಸ್ಮಾರ್ಟ್ ಸಿಟಿ ಯೋಜನೆಗಳ ಬಗ್ಗೆ ಸ್ವತಂತ್ರ ಸಂಸ್ಥೆ ಒಳಗೊಂಡಂತೆ ಸಮಿತಿ ರಚಿಸಿ ತನಿಖೆ ನಡೆಸಿ 3 ತಿಂಗಳ ಕಾಲಮಿತಿಯೊಳಗೆ ವರದಿಯನ್ನು ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುಪಾತದಡಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗಳಲ್ಲಿ ಬಹುತೇಕ ರಸ್ತೆ ನಿರ್ಮಾಣ, ಒಳಚರಂಡಿ, ಉದ್ಯಾನವನಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯಗಳಿಗೆ ಅನುದಾನವನ್ನು ವೆಚ್ಚ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸಚಿವ ಬೈರತಿ ಸುರೇಶ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮಪಾಲು ಅನುದಾನ ಇದಾಗಿದ್ದು, ಇದನ್ನು ಹೆಚ್ಚಿನ ರೀತಿಯಲ್ಲಿ ಸ್ಮಾರ್ಟ್ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್ ನಿಲ್ದಾಣ ಸೇರಿದಂತೆ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳು ಸರ್ಕಾರದ ಆಸ್ತಿಗಳನ್ನು ವೃದ್ಧಿಸುವಂತೆ ಇರಬೇಕೆ ಹೊರತು ರಸ್ತೆ ನಿರ್ಮಾಣ, ಚರಂಡಿ ಹಾಗೂ ಇತರೆ ಕಾಮಗಾರಿಗಳಿಗೆ ಬಳಸಿರುವುದು ಸರಿಯಾದ ಮಾರ್ಗವಲ್ಲವೆಂದು 6 ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರುಗಳನ್ನು ತರಾಟೆಗೆತ್ತಿಕೊಂಡರು. ಪ್ರತಿ ಸ್ಮಾರ್ಟ್ ಸಿಟಿಗೂ ಅಂದಾಜು ರೂ. 990 ಕೋಟಿಗಳ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಶೈಕ್ಷಣಿಕ ಶೇ. 2 ರಷ್ಟು, ಇಂಧನ ಶೇ. 8 ರಷ್ಟು, ಆರೋಗ್ಯ ಶೇ. 2 ರಷ್ಟು, ಮಾಹಿತಿ ತಂತ್ರಜ್ಞಾನಕ್ಕೆ ಶೇ. 8 ರಷ್ಟು ಒಟ್ಟಾರೆಯಾಗಿ ಶೇ. 20 ರಷ್ಟು ಅನುದಾನವನ್ನು ಕೆರೆ ಮತ್ತು ಉದ್ಯಾನವನ ಶೇ. 9 ರಷ್ಟು, ಮಾರುಕಟ್ಟೆ ಶೇ. 5 ರಷ್ಟು, ರಸ್ತೆ ನಿರ್ಮಾಣ ಶೇ. 36 ರಷ್ಟು, ಕ್ರೀಡಾ ವಲಯಕ್ಕೆ ಶೇ. 5 ರಷ್ಟು, ಸಾರಿಗೆ ವ್ಯವಸ್ಥೆಗೆ ಶೇ. 8 ರಷ್ಟು, ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶೇ. 18 ರಷ್ಟು ಅನುದಾನ ಹಂಚಿಕೆಯಾಗಿದ್ದು, ಈ ವಲಯಗಳಲ್ಲಿ ನಡೆದಿರುವ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಅವುಗಳಲ್ಲಿ ಕೆಲವು ಸಮರ್ಪಕವಾಗಿ ನಡೆದಿಲ್ಲ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರ ಗಮನಕ್ಕೆ ಬಂತು. ಹೀಗಾಗಿ ಒಟ್ಟಾರೆಯಾಗಿ ನಡೆದಿರುವ ಎಲ್ಲಾ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸ ಬೇಕಾಗುತ್ತದೆ ಎಂದು ಸಚಿವ ಬೈರತಿ ಸಭೆಯಲ್ಲಿ ತಿಳಿಸಿದರು.
ತನಿಖಾ ಸಮಿತಿಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಅಭಿಯಂತರರು, ಲೋಕೋಪಯೋಗಿ ಇಲಾಖೆಯಿಂದ ಮುಖ್ಯ ಅಭಿಯಂತರ ದರ್ಜೆಯ ಓರ್ವ ಅಧಿಕಾರಿ ಹಾಗೂ ಆಯಾ ಸ್ಮಾರ್ಟ್ ಸಿಟಿ ವ್ಯಾಪ್ತಿಗಳಲ್ಲಿ ಬರುವ ವಿಶ್ವ ವಿದ್ಯಾನಿಲಯದ ತಾಂತ್ರಿಕ ಪರಿಣಿತರು ಮತ್ತು Indian Institute of Science ಸಂಸ್ಥೆಯಿಂದ ಓರ್ವ ಪರಿಣಿತ ತಜ್ಞರನ್ನು ಸಮಿತಿ ಒಳಗೊಳ್ಳಬೇಕು, ಅಗತ್ಯ ತನಿಖೆ ನಡೆಸಿ ಸಮಗ್ರ ವರದಿಯನ್ನು ಮೂರು ತಿಂಗಳ ಕಾಲಮಿತಿಯೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದರು.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್, ಮುಖ್ಯ ಅಭಿಯಂತರ ನಂದೀಶ್, 6 ಸ್ಮಾರ್ಟ್ ಸಿಟಿಗಳ ವ್ಯವಸ್ಥಾಪಕ ನಿರ್ದೇಶಕರುಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Urban Development Minister BS ‘Bairati’ Suresh, on Thursday, instructed officials to conduct a complete investigation into the works carried out in six Smart City projects of Karnataka, not including Bengaluru, and submit a report.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am