ಬ್ರೇಕಿಂಗ್ ನ್ಯೂಸ್
11-01-25 09:14 pm Bangalore Correspondent ಕರ್ನಾಟಕ
ಬೆಂಗಳೂರು, ಜ.11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿ ಮೇಲೆ ಲೋಕಾಯುಕ್ತ ದಾಳಿ ವೇಳೆ ಹಲವು ಅಕ್ರಮ ಪತ್ತೆಯಾಗಿದ್ದು ತಾಯಿ ಬದಲು ಮಗನೇ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಬಿಬಿಎಂಪಿ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಲಾಗಿತ್ತು. ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ(ಎಆರ್‌ಒ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ಆಗಿರುವ ಕವಿತಾ ಅವರ ಮಗ ನವೀನ್ ಅವರನ್ನು ನ್ಯಾಯಮೂರ್ತಿ ವೀರಪ್ಪ ಅವರು ವಿಚಾರಿಸಿದಾಗ, ಸಾರ್ವಜನಿಕರಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಲು ನನ್ನ ತಾಯಿ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಯಾವುದೇ ಹಿಂಜರಿಕೆಯಿಲ್ಲದೆ ಹೇಳಿದ್ದಾನೆ. ನವೀನ್ ತನ್ನ ತಾಯಿ ಬದಲು ತಾನು ಗಜೇಟೆಡ್ ಅಧಿಕಾರಿಯಂತೆ ಕೆಲಸ ಮಾಡುತ್ತಿರುವುದನ್ನು ಸಮರ್ಥಿಸಿಕೊಂಡಿದ್ದಾನೆ ಎಂದು ನ್ಯಾಯಮೂರ್ತಿ ವೀರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಿಬಿಎಂಪಿ ಕಚೇರಿಗಳಲ್ಲಿ ಇಂತಹ ಅಕ್ರಮ ನಡೆಯುತ್ತಿರುವುದು ವಿಷಾದಕರ ಎಂದು ಅವರು, ಮಗ ತನ್ನ ತಾಯಿಯ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಪಡೆದುಕೊಂಡಿದ್ದು, ತಾಯಿ ಬದಲು ಆತನೇ ಸಹಿ ಮಾಡುತ್ತಿರುವುದು ದುರದೃಷ್ಟಕರ. ಇದಲ್ಲದೆ, ಎಆರ್‌ಒ ಸುಜಾತಾ ಅವರು, 10,000 ರೂ. ಪಾವತಿಸಿ ಗೀತಾ ಎಂಬವರನ್ನ ಸಹಾಯಕಿಯಾಗಿ ಅನಧಿಕೃತವಾಗಿ ನೇಮಕ ಮಾಡಿಕೊಂಡಿದ್ದರು. "ಇದು ಬಿಬಿಎಂಪಿ ಒಳಗಿನ ಅರಾಜಕತೆಯನ್ನು ತೋರಿಸುತ್ತದೆ. ನಾವು ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಅವರನ್ನು ವಿಚಾರಣೆಗೆ ಒಳಪಡಿಸುತ್ತೇವೆ" ಎಂದು ಅವರು ಹೇಳಿದ್ದಾರೆ.
ಕರ್ತವ್ಯ ದುರುಪಯೋಗ ಕಾರಣಕ್ಕೆ ಸಿದ್ದಾಪುರ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಚೇರಿ ಮುಖ್ಯಸ್ಥರಾದ ಸುಜಾತ, ಕೇಸ್ ವರ್ಕರ್ ಕವಿತಾ, ಮಗ ನವೀನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ನವೀನ್ನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಮತ್ತು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡ ಬಿಬಿಎಂಪಿಯ ಎಂಟು ವಲಯಗಳ 54 ಕಚೇರಿಗಳ ಮೇಲೆ ಏಕಕಾಲದಲ್ಲಿ ಅನಿರೀಕ್ಷಿತ ದಾಳಿ ನಡೆಸಿದೆ. ಇ-ಖಾತಾಗಳಿಗೆ ಸಂಬಂಧಿಸಿ ಕಂದಾಯ ಅಧಿಕಾರಿಗಳು ಮತ್ತು ಸಹಾಯಕ ಕಂದಾಯ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಹಾಗೂ ಅನಧಿಕೃತ ನಿರ್ಮಾಣಗಳ ವಿರುದ್ಧ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಮತ್ತು ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳ ನಿಷ್ಕ್ರಿಯತೆ ಬಗ್ಗೆ ಲೋಕಾಯುಕ್ತಕ್ಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
A Bruhat Bengaluru Mahanagara Palike (BBMP) employee’s son was found working on her behalf with her login credentials on the office system at South End Circle BBMP office when Upa Lokayukta B. Veerappa landed at the office for a surprise inspection on Friday afternoon.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm