ಬ್ರೇಕಿಂಗ್ ನ್ಯೂಸ್
14-01-25 03:36 pm HK News Desk ಕರ್ನಾಟಕ
ಹಾಸನ, ಜ 14: ಚಾಲಕನ ನಿಯಂತ್ರಣ ತಪ್ಪಿ ಹತ್ತು ಚಕ್ರದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್‌ಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗುಳಗಳಲೆ ಸಮೀಪ ನಡೆದಿದೆ.
ಬಾಳ್ಳುಪೇಟೆಯ ತೌಫಿಕ್ (27) ಹಾಗೂ ಚಿತ್ರದುರ್ಗ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಬಗ್ನಾರೆಡ್ಡಿ ಗ್ರಾಮದ ಈರೇಶ್ (60) ಮೃತ ದುರ್ದೈವಿಗಳು. ಹಾಸನದಿಂದ ಮಂಗಳೂರಿಗೆ ಗೂಡ್ಸ್ ತುಂಬಿಕೊಂಡು ತೆರಳುತ್ತಿದ್ದ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಾರಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮಹಮದ್ ಖಾದರ್ ಎಂಬವರ ಕ್ಯಾಂಟಿನ್‌ಗೆ ನುಗ್ಗಿದೆ.


ಕ್ಯಾಂಟಿನ್ ಬಳಿ ಹತ್ತಾರು ಮಂದಿ ಟೀ ಕುಡಿಯುತ್ತಿದ್ದು, ಇವರಲ್ಲಿ ಜೆಜೆಎಂ ಕೆಲಸ ಮಾಡಲು ಬಂದಿದ್ದ ವೀರೇಶ್ ಹಾಗೂ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ತೌಫಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೀ ಅಂಗಡಿ ಮುಂದೆ ನಿಲ್ಲಿಸಿದ್ದ 2 ಬೈಕ್‌ಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿ ರಭಸಕ್ಕೆ ಕ್ಯಾಂಟಿನ್ ಸಂಪೂರ್ಣ ನೆಲಸಮವಾಗಿದೆ.
ಇಂದು ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದು ಮಕ್ಕಳು ಅಪಘಾತ ನಡೆದ ಸಮೀಪವೇ ಆಟವಾಡುತ್ತಿದ್ದರು. ಅಲ್ಲದೇ ಕ್ಯಾಂಟಿನ್ ಅಕ್ಕಪಕ್ಕದಲ್ಲೇ ವಾಸದ ಮನೆಗಳಿದ್ದು, ಕ್ಯಾಂಟಿನ್ ಡಿಕ್ಕಿ ಹೊಡೆದು ಲಾರಿ ಮಗುಚಿ ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Vrl truck accident at Hassan, two killed after truck rams into canteen. The deceased have been identified as Toufiq (27) and Eshwar (60).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm