ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm