ಬ್ರೇಕಿಂಗ್ ನ್ಯೂಸ್
22-01-25 06:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.22: ತನ್ನ ಒಂದು ಕಾಲದ ಸ್ನೇಹಿತ, ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧವೇ ಮಾಜಿ ಸಚಿವ, ಬಿಜೆಪಿ ಮುಖಂಡ ಶ್ರೀರಾಮುಲು ವಾಗ್ದಾಳಿ ನಡೆಸಿದ್ದು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅಪಸ್ವರ ಎದ್ದಿರುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ರಾಜ್ಯಕ್ಕೆ ಬಂದಿರುವ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಜ.21ರ ಸಂಜೆ ಕೋರ್ ಕಮಿಟಿ ಸಭೆ ನಡೆಸಿದ್ದರು. ಸಭೆಯಲ್ಲಿ ಸಂಡೂರು ವಿಧಾನಸಭೆ ಉಪ ಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದೆ. ಈ ವೇಳೆ ನೀವು ಸರಿಯಾಗಿ ಕೆಲಸ ಮಾಡದೇ ಇದ್ದ ಕಾರಣಕ್ಕೆ ಸೋಲಾಗಿದೆ ಎಂದು ಶ್ರೀರಾಮುಲು ವಿರುದ್ಧವೇ ರಾಧಾ ಮೋಹನ್ ದಾಸ್ ಗಂಭೀರ ಆರೋಪ ಮಾಡಿದ್ದಾರೆ.
ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಚುನಾವಣೆ ಸೋಲಿನ ಕುರಿತಾಗಿ ಇನ್ನೂ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ನೇತೃತ್ವದಲ್ಲಿ ಸಮಿತಿ ನೇಮಿಸಿದ್ದರೂ, ವರದಿ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತೀರಿ ಎಂದು ಶ್ರೀರಾಮುಲು ಸಭೆಯಲ್ಲೇ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, ಉಪ ಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದಿದ್ದಾರೆ.
ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ಅವರು ಉತ್ತರಪ್ರದೇಶ ರಾಜ್ಯದವರು. ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರೋದು ಸ್ಪಷ್ಟವಾಗಿದೆ ಎಂದರು.
ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮುಲು ತನ್ನ ಹಳೆ ಸ್ನೇಹಿತನ ವಿರುದ್ಧ ಕಿಡಿಕಾರಿದರು.
Janardhana Reddy is trying to destroy my political career says friend Sreeramulu. The state BJP Core Committee has decided to send three names from each district for the district president post, keeping social justice in mind. The committee meeting was attended by BJP state president BY Vijayendra, former CMs Sadananda Gowda and Basavaraj Bommai, B Sriramulu and others in Bengaluru on Tuesday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm