ಬ್ರೇಕಿಂಗ್ ನ್ಯೂಸ್
24-01-25 02:48 pm Bangalore Correspondent ಕರ್ನಾಟಕ
ಬೆಂಗಳೂರು, ಜ.24: ಕಾಂಗ್ರೆಸ್ ಪಕ್ಷದಲ್ಲಿ ವಾಲ್ಮೀಕಿ ಹಾಗೂ ಎಸ್‌ಟಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಪ್ರತಿಯಾಗಿ ಇನ್ನೊಬ್ಬ ನಾಯಕನನ್ನು ಬೆಳೆಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀರಾಮುಲು ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಮುಲು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ, ಆದರೆ ನನ್ನ ಬಗ್ಗೆ ಆರೋಪ ಮಾಡಿ ಹೋಗೋದು ಬೇಡ. ನಾನು 40 ವರ್ಷಗಳಲ್ಲಿ ಅವರಿಗೆ ಮಾಡಿರುವ ಸಹಾಯವನ್ನು ಬೂದಿಯಲ್ಲಿ ಹಾಕಿ, ಎಲ್ಲವನ್ನು ಮರೆತು ಹೋಗುವುದಾದರೆ ಹೋಗಲಿ ಎಂದಿದ್ದಾರೆ.
ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ಬಳ್ಳಾರಿ ಜನ ಮಾತನಾಡಿಕೊಳ್ಳತ್ತಿದ್ದಾರೆ. ಪಕ್ಷ ಬಿಡೋದು ಅವರ ವೈಯಕ್ತಿಕ ವಿಚಾರ. ಹೋಗುವುದಾದರೆ ಅವರು ಹೋಗಲಿ. ಪಕ್ಷ ಬಿಟ್ಟು ಹೋಗುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ರೆಡ್ಡಿ ತಿರುಗೇಟು ನೀಡಿದರು. ನಾನು ಭಗವಂತನನ್ನು ನಂಬಿದ್ದೇನೆ, ಕರ್ಮ ಯಾರನ್ನು ಬಿಡುವುದಿಲ್ಲ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಷಯವನ್ನು ಸವಿಸ್ತಾರವಾಗಿ ಹೇಳುತ್ತೇನೆ ಎಂದಿದ್ದಾರೆ.
ಪಕ್ಷ ಯಾರ ಪರವಾಗಿ ಕೆಲಸ ಮಾಡು ಎಂದು ಸೂಚಿಸುತ್ತದೋ ಅವರ ಪರ ಕೆಲಸ ಮಾಡುತ್ತೇನೆ. ನನಗೆ ನಾಳೆ ರಾಮುಲು ಪರವಾಗಿ ಕೆಲಸ ಮಾಡಲು ಹೇಳಿದರೆ ನಾನು ಕೆಲಸ ಮಾಡ್ತೇನೆ. ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಅಧ್ಯಕ್ಷ ಅಂತ ತೀರ್ಮಾನ ಮಾಡಿದರೆ ನಾವು ಒಪ್ಪಲೇಬೇಕು. ಮೋದಿ ಪ್ರಧಾನಿ ಅಭ್ಯರ್ಥಿ ಅಂತ ಹೇಳಿದಾಗ, ಅಡ್ವಾಣಿ ಸಹಿತ ಎಲ್ಲರೂ ಕೆಲಸ ಮಾಡಿದ್ದಾರೆ. ಹಾಗೆ ವಿಜಯೇಂದ್ರ ಅವರನ್ನು ಅಧ್ಯಕ್ಷ ಅಂದ ಮೇಲೆ ನಾವು ಒಪ್ಪಬೇಕು. ಅದು ನಾಲ್ಕು ಜನರಿಗೆ ಇಷ್ಟ ಇಲ್ಲ ಅಂದ್ರೆ, ನೀವು ಅವರ ಜೊತೆಗೆ ಹೋಗಿ ನಿಂತರೆ ಸರಿಯಾಗಲ್ಲ ಎಂದು ಹೇಳಿದರು.
MLA Janardhana Reddy has accused Deputy Chief Minister D.K. Shivakumar of promoting Sriramulu to replace Valmiki and ST community leader Satish Jarkiholi in the Congress party.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm