ಬ್ರೇಕಿಂಗ್ ನ್ಯೂಸ್
27-01-25 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜ 27: ಇಲ್ಲಿನ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕಲ್ ವಾಹನಗಳ ಶೋ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಅಗ್ನಿಗೆ ಆಹುತಿಯಾಗಿದ್ದೆ.
ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಒಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೂ ರೂಮ್ನಲ್ಲಿ ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷರ್ಣಾಧದಲ್ಲಿ ಅಗ್ನಿ ವ್ಯಾಪ್ತಿಸಿ ಅನಾಹುತ ಸಂಭವಿಸಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬೈಕ್ ಶೂ ರೂಮ್ನಲ್ಲಿ ಎಂದಿನಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಸಿಬ್ಬಂದಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಆರ್ಟಿಓ ಅಧಿಕಾರಿಗಳು ಶೋ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಲೋಪದೋಷ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 250 ವ್ಯಾಟ್ ಬ್ಯಾಟರಿ ಬಳಕೆಯ 25 ಕಿ.ಮೀ ವೇಗದ ವಾಹನಗಳಿಗೆ ಮಾತ್ರ ಪರವಾನಗಿ ಪಡೆಯಲಾಗಿತ್ತು. ಆದರೆ ಶೋ ರೂಮ್ನಲ್ಲಿ ನಿಗದಿಗಿಂತ ಹೆಚ್ಚು ಸಾಮರ್ಥ್ಯ ಬಳಕೆಯ ಬ್ಯಾಟರಿ ಬಳಸುತ್ತಿರುವುದು ಕಂಡುಬಂದಿತ್ತು. ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಟರಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಅಗ್ನಿ ಆರಿದ ನಂತರ ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ನ.19ರಂದು ರಾಜಾಜಿನಗರ ರಸ್ತೆಯಲ್ಲಿ ಮೈ ಇವಿ ಶೋ ರೂಮ್ನಲ್ಲಿಯೂ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಶೋ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಸಜೀವ ದಹನವಾಗಿದ್ದಳು. ದುರಂತದಲ್ಲಿ 25ಕ್ಕಿಂತ ಹೆಚ್ಚು ಇವಿ ಬೈಕ್ಗಳು ಬೆಂಕಿಗಾಹುತಿಯಾಗಿದ್ದವು.
A fire broke out at the Okinawa electric bike showroom on Rajkumar Road in Rajajinagar, Bengaluru on Monday. Visuals from the scene showed that most of the electric bikes displayed in the showroom were gutted in the flames and significantly damaged.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm