ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm