ಬ್ರೇಕಿಂಗ್ ನ್ಯೂಸ್
29-01-25 02:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಕನ್ನಡಿಗರು ಕೂಡ ಸಿಲುಕಿಕೊಂಡಿದ್ದಾರೆ. ಬೆಳಗಾವಿಯಿಂದ ಖಾಸಗಿ ಬಸ್ನಲ್ಲಿ ಮೂವತ್ತು ಜನರ ತಂಡ ಪ್ರಯಾಗರಾಜ್ಗೆ ಹೋಗಿತ್ತು. ಈ ಪೈಕಿ ಕಾಲ್ತುಳಿತದ ಬಳಿಕ ಐವರು ನಾಪತ್ತೆ ಆಗಿದ್ದಾರೆ.
ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಚದುರಿ ಹೋಗಿದ್ದ ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲ್ತುಳಿತದ ಭೀಕರತೆಯನ್ನು ಕನ್ನಡತಿ ಸರೋಜಿನಿ ಎಂಬಾಕೆ ಬಿಚ್ಚಿಟ್ಟಿದ್ದಾರೆ. ಎರಡು ಬಸ್ನಲ್ಲಿ 60 ಜನ ಬಂದಿದ್ದೆವು. 9 ಜನ ಸ್ನಾನ ಮಾಡುವುದಕ್ಕೆ ಹೋದಾಗ ಕಾಲ್ತುಳಿತ ಸಂಭವಿಸಿತು. ತಪ್ಪಿಸಿಕೊಳ್ಳಲು ನಮಗೆ ಯಾವುದೇ ದಾರಿಯೇ ಸಿಕ್ಕಿಲ್ಲ ಎಂದಿದ್ದಾರೆ.
ಬೆಂಗಳೂರಿನ ಉಮೇಶ್ ಈ ಬಗ್ಗೆ ಮಾತನಾಡಿದ್ದು, ಗಾಯ ಆಗಿದೆ, ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. 22 ಕಿ.ಮೀ ನಡೆದುಕೊಂಡು ಹೋಗಿದ್ದೇನೆ. ಭಕ್ತರಿಗೆ ಯಾವುದೇ ವಾಹನದ ವ್ಯವಸ್ಥೆ ಮಾಡಿಲ್ಲ ಎಂದು ಅಳಲು ಹೇಳಿಕೊಂಡಿದ್ದಾರೆ.
ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಕಾಂಚನಾ ಕೋರ್ಪಡೆ ಮಾತ್ರ ಸಂಪರ್ಕದಲ್ಲಿದ್ದು, ಅರುಣ್ ಕೋಪರ್ಡೆ ಪುತ್ರನ ಸಂಪರ್ಕಕ್ಕೆ ಸಿಕ್ಕಿಲ್ಲ. ತಂದೆಯ ಮೊಬೈಲ್ ಮಿಸ್ ಆಗಿರಬಹುದು ಎಂದು ಪುತ್ರ ಓಂಕಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಅನೇಕ ಮಂಡಿ ವಿವಿಧ ಗುಂಪುಗಳಾಗಿ ಪ್ರಯಾಗ್‌ರಾಜ್‌ಗೆ ತೆರಳಿದ್ದಾರೆ. ಕೆಲವರು ರೈಲು ಮತ್ತು ವಿಮಾನದಲ್ಲಿ ಪ್ರಯಾಣಿಸಿದರೆ ಕೆಲವರು ಮಿನಿ ಬಸ್ ಮತ್ತು ಇತರ ವಾಹನಗಳಲ್ಲಿ ತೆರಳಿದ್ದರು. ಸಂಪರ್ಕಕ್ಕೆ ಸಿಗದ ಸಂಬಂಧಿಕರ ಬಗ್ಗೆ ಊರಿನಲ್ಲಿದ್ದವರು ಆತಂಕಗೊಂಡಿದ್ದಾರೆ.
ಜನವರಿ 28 ರ ಮಧ್ಯರಾತ್ರಿಯ ನಂತರ ಪ್ರಯಾಗ್‌ರಾಜ್‌ನ ಸಂಗಮ್ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ನೀಡಿಲ್ಲ.
Four people -- two women and two girls from Belagavi-- are said to have suffered injuries in the stampede while on their way for the bathing ritual on the occasion of ‘Mauni Amavasya’ at the Mahakumbh at Prayagraj in Uttar Pradesh on Wednesday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm