ಬ್ರೇಕಿಂಗ್ ನ್ಯೂಸ್
30-01-25 01:50 pm HK News Desk ಕರ್ನಾಟಕ
ಗದಗ, ಜ.30: ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಕೋಪದಲ್ಲಿ ಯುವ ದಂಪತಿಯನ್ನು ನಡು ಬೀದಿಯಲ್ಲಿ ಹತ್ಯೆಗೈದ ನಾಲ್ವರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ 2019ರಲ್ಲಿ ಘಟನೆ ನಡೆದಿತ್ತು.
ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ದಲಿತ ಸಮುದಾಯದ ರಮೇಶ ಮಾದರ ಮತ್ತು ಗಂಗಮ್ಮ ಪ್ರೀತಿಸಿ ಮದುವೆಯಾಗಿದ್ದರು. ಇದರಿಂದ ಸಿಟ್ಟಿಗೆದ್ದ ಗಂಗಮ್ಮ ಕುಟುಂಬಸ್ಥರು ಇಬ್ಬರನ್ನೂ 2019ರ ನವೆಂಬರ್ 6ರಂದು ಬರ್ಬರವಾಗಿ ಕೊಲೆ ಮಾಡಿದ್ದರು. ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ತಾನು ಪ್ರೀತಿಸಿದ್ದ ಯುವಕನನ್ನು ಅಂತರಜಾತಿ ವಿವಾಹ ಆಗಿದ್ದಕ್ಕೆ ಆಕೆಯ ಸೋದರ ಸಂಬಂಧಿಕರೇ ಸೇರಿ ಕ್ರೂರವಾಗಿ ಕೊಲೆ ಮಾಡಿದ್ದರು. ಚಾಕು, ಚೂರಿಯಿಂದ ಹಲ್ಲೆಗೈದು ದೊಣ್ಣೆಯಲ್ಲಿ ಹೊಡೆದು ಕೊಂದಿದ್ದರು.
ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ 3 427, 449, 302, 506(2) ಅಡಿಯಲ್ಲಿ ಕೇಸು ದಾಖಲಿಸಿ ನ್ಯಾಯಾಲಕ್ಕೆ ಪೊಲೀಸರು ದೋಷಾರೋಪಣೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಗದಗ ಜಿಲ್ಲಾ ನ್ಯಾಯಾಲಯ ನಾಲ್ವರು ಆರೋಪಿಗಳಾದ ಶಿವಪ್ಪ ರಾಠೋಡ, ರವಿಕುಮಾರ ರಾಠೋಡ, ರಮೇಶ ರಾಠೋಡ ಹಾಗೂ ಸಾರಿಗೆ ಇಲಾಖೆ ಚಾಲಕ ಪರಶುರಾಮ ರಾಠೋಡ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.
ದಂಪತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗಲೇ ಗುಂಪು ಸೇರಿಕೊಂಡು ಭೀಕರವಾಗಿ ಹೊಡೆದು ಕೊಲೆ ಮಾಡಲಾಗಿತ್ತು. ಇದರ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ್ದವು. ಕೊಲೆ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿತ್ತು. ಜೊತೆಗೆ, ಮರ್ಯಾದೆಗೇಡು ಹತ್ಯೆಯಿಂದ ಪ್ರೀತಿ ಮಾಡುವ ಎಲ್ಲ ಜೋಡಿಗಳಿಗೂ ನಡುಕ ಉಂಟಾಗಿತ್ತು. ಕೊಲೆಯ ನಂತರವೂ ಗ್ರಾಮದಲ್ಲಿ ತಾವು ಮಾಡಿದ್ದೇ ಸರಿ ಎಂಬಂತೆ ಓಡಾಡುತ್ತಿದ್ದ ಈ ನಾಲ್ವರು ಈಗ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ.
Gadag Court Sentences Death Penalty to 4 People Involved in Honor Killing. In a landmark decision, a district court in Gadag has sentenced four individuals to death for the brutal honour killing of a young couple who defied societal norms to marry. The victims, Ramesh Madara and Gangamma Madara, hailed from Lakkalakatti village in Gajendragada taluk and were tragically killed on November 6, 2019.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm