ಬ್ರೇಕಿಂಗ್ ನ್ಯೂಸ್
30-01-25 03:35 pm HK News Desk ಕರ್ನಾಟಕ
ಮೈಸೂರು, ಜ.30: ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ನೇಮಕದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ಅಧ್ಯಕ್ಷರ ನೇಮಕದಲ್ಲಿ ಸುಧಾಕರ್ ಅವರನ್ನ ನಾನು ವಿಶ್ವಾಸಕ್ಕೆ ತೆಗದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಏಕೆಂದರೆ, ಅದರ ಚುನಾವಣೆ ಉಸ್ತುವಾರಿ ಹೊತ್ತವರೇ ಬೇರೆ. ಉಸ್ತುವಾರಿಗಳು ಹೈಕಮಾಂಡ್ ಗೆ ಹೆಸರು ಕಳುಹಿಸಿದ್ದಾರೆ.
ಹೈಕಮಾಂಡ್ ತೀರ್ಮಾನ ಮಾಡಿದ್ದಾರೆ. ಇದರಲ್ಲಿ ಯಾವ ಹಂತದಲ್ಲೂ ನನ್ನ ಪಾತ್ರ ಬರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಡಾ.ಸುಧಾಕರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಸುಧಾಕರ್ ಅವರಿಗೆ ಅನುಭವ ಹಾಗೂ ಮಾಹಿತಿ ಕೊರತೆ ಇದೆ. ಹೀಗಾಗಿ ಈ ರೀತಿ ಮಾತನಾಡಿದ್ದಾರೆ. ಇದರಲ್ಲಿ ನಾನು ಟಾರ್ಗೆಟ್ ಆಗಿದ್ದೇನೆ, ಯಡಿಯೂರಪ್ಪ ಮಗ ಅನ್ನುವ ಕಾರಣಕ್ಕೆ ಟಾರ್ಗೆಟ್ ಆಗಿದ್ದೇನೆ ಎಂಬುದೆನ್ನಲ್ಲ ನಾನು ಹೇಳುವುದಿಲ್ಲ. ನನಗೆ ಯಡಿಯೂರಪ್ಪನವರ ಮಗ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಎಲ್ಲಾ ಟೀಕೆಗಳಿಂದ ಪಾಠ ಕಲಿತಿದ್ದೇನೆ ಎಂದು ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಹೇಳಿದ್ದಾರೆ.
ನನಗೆ ಸುಧಾಕರ್ ಯಾವುದೇ ಫೋನ್ ಕರೆ ಮಾಡಿಲ್ಲ. ನಾಲ್ಕು ದಿನಗಳ ಹಿಂದೆ ಮಾತನಾಡಬೇಕು ಅಂಥ ಮೇಸೆಜ್ ಮಾಡಿದ್ರು. ನಾನು ಅನಿವಾರ್ಯವಾಗಿ ದೆಹಲಿಗೆ ಹೋಗಬೇಕಿತ್ತು. ಹೀಗಾಗಿ ಭೇಟಿ ಸಾಧ್ಯವಾಗಲಿಲ್ಲ. ಅಂತಹ ನಾಯಕರು ಕರೆ ಮಾಡಿದರೆ ಸ್ವೀಕರಿಸಲು ಆಗದಷ್ಟು ದೊಡ್ಡವನು ನಾನಲ್ಲ. ಯಾವ ಅರ್ಥದಲ್ಲಿ ಸುಧಾಕರ್ ಟೀಕೆ ಮಾಡಿದ್ದಾರೆ ಗೊತ್ತಿಲ್ಲ. ಪಕ್ಷಕ್ಕಾಗಿ ನಾನು ಎಲ್ಲಾ ಟೀಕೆಗಳನ್ನ ಸಹಿಸಿಕೊಳ್ಳುತ್ತೇನೆ.
ಯಾರು ಏನೇ ಮಾತನಾಡಲಿ ಎಲ್ಲವನ್ನೂ ಸೌಮ್ಯವಾಗಿ ಸ್ವೀಕರಿಸಿದ್ದೇನೆ. ಎಲ್ಲರಿಂದಲೂ ಅನುಭವಗಳನ್ನ ಕಲಿಯುತ್ತಿದ್ದೇನೆ. ನನಗೆ ಪಕ್ಷ ಮಾತ್ರ ಮುಖ್ಯ. ನಾನು ಯಡಿಯೂರಪ್ಪನವರಿಂದ ಜೀವನದ ಅನುಭವಗಳನ್ನ ಕಲಿತಿದ್ದೇನೆ. ನಾನು ಯಾರ ಜೊತೆಯೂ ಯುದ್ಧ ಮಾಡಲು ಅಧ್ಯಕ್ಷ ಆಗಿಲ್ಲ. ಪಕ್ಷ ಕಟ್ಟಲು ಅಧ್ಯಕ್ಷ ಅಗಿದ್ದೇನೆ ಅಷ್ಟೇ. ಸುಧಾಕರ್ ಬಾಯಲ್ಲಿ ಯುದ್ಧದ ಮಾತು ಯಾಕೆ ಬಂತೋ ಗೊತ್ತಿಲ್ಲ. ನಾನು ಅವರ ಜೊತೆ ಮಾತನಾಡಲು ಮುಕ್ತನಾಗಿದ್ದೇನೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
No role in selecting district president says B. Y. Vijayendra to Dr Sudhakar. With this demand, Sudhakar became the latest growing voice of disgruntled leaders in the state, who are lobbying hard to replace Vijayendra as the state unit president.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm