ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm