ಬ್ರೇಕಿಂಗ್ ನ್ಯೂಸ್
07-02-25 04:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ನೂತನ ಮಸೂದೆ ಕುರಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ಹೇಳಿಕೊಂಡಿದ್ದು ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ.
ಪ್ರಸ್ತಾವಿತ ಮಸೂದೆಯಲ್ಲಿ ಹಲವು ಲೋಪ ದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ರಾಜಭವನಕ್ಕೆ ಕಳುಹಿಸಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ, ಪರಿಷ್ಕರಣೆ ಮಾಡಿ ಮಸೂದೆ ಜಾರಿಗೆ ತರಬೇಕಿದೆ.
ಮೊದಲು ಮಸೂದೆಯ ಕೆಲವು ದೋಷಗಳನ್ನು ಗುರುತಿಸಿ ಸರಿಪಡಿಸುವಂತೆ ಸ್ಪಷ್ಟೀಕರಣಕ್ಕಾಗಿ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದ್ದರು. ಆಬಳಿಕ ಮತ್ತೊಮ್ಮೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ ಮುಖ್ಯ ಕಾರ್ಯದರ್ಶಿ ಮತ್ತು ಸಿಎಂ ಕಾರ್ಯದರ್ಶಿ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆಯನ್ನೂ ನೀಡಿದ್ದರು. ಇದೀಗ ಆರ್‌ಬಿಐ ನಿಯಮಾವಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲ ಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕಾಗಿದೆ. ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ. ಅಲ್ಲಿಯೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ ಹೇಗೆ ಹಾಕುತ್ತೀರಾ? ಸಾಲ ಪಡೆಯುವವನ ಬಳಿ ಏನೂ ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ಮೇಲೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದ್ದು, ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಸೂಕ್ತ ರೀತಿಯಲ್ಲಿ ಸಾಲ ಕೊಟ್ಟವರಿಗೂ, ಸಾಲ ಮರುಪಾವತಿ ಮಾಡುವವರಿಗೂ ಇಲ್ಲಿ ಸಮಸ್ಯೆ ಆಗಲಿದೆ. ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ತಿಲ್ಲ. ಪೊಲೀಸರು ಸರಿಯಾದ ಕ್ರಮ ಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ಆಕ್ಷೇಪ ಎತ್ತಿದ್ದಾರೆ.
Governor Thaawarchand Gehlot on Friday rejected Karnataka Micro Finance (Prevention of Coercive Actions) Ordinance 2025 that the Siddaramaiah-led Congress government had proposed to regulate microfinance.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm