ಬ್ರೇಕಿಂಗ್ ನ್ಯೂಸ್
10-02-25 10:51 pm HK News Desk ಕರ್ನಾಟಕ
ಮಂಡ್ಯ, ಫೆ 10: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್‌ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯ (27) ಮೃತ ಮಹಿಳೆ.
ತಾಲೂಕಿನ ಮಾಚಳ್ಳಿ ಗ್ರಾಮದ ಗೋವಿಂದರವರ ಪುತ್ರಿ ದಿವ್ಯ ಅವರನ್ನು ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ವೈಭವ್ ಫಿಟ್ನೆಸ್ ಎಂಬ ಜಿಮ್ ಅನ್ನು ತೆರೆದು ಜೀವನ ಸಾಗಿಸುತ್ತಿದ್ದೆರನ್ನಲಾಗಿದೆ.
ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣು ;
ಎಂದಿನಂತೆ ಜಿಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವ್ಯ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಪತಿ ಗಿರೀಶ್ ಸ್ಥಳದಿಂದ ಪರಾರಿಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕುಟುಂಬದ ಜಗಳದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಜರು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತಳ ತಂದೆ ಗೋವಿಂದ ನೀಡಿದ ದೂರಿನ ಮೇರೆಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್‌ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ತೆರಳಿ ಸಂಬಂಧಿಕರನ್ನು ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ, ಹೀಗಾಗಿ ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.
27 year old wife commits suicide in husbands own gym in Mandya. The diseased as been identified as divya. It is said that she committed this extreme step due to husbands illicit affair
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am