ಬ್ರೇಕಿಂಗ್ ನ್ಯೂಸ್
14-02-25 08:44 pm HK News Desk ಕರ್ನಾಟಕ
ಮೈಸೂರು, ಫೆ.14: ಕಲ್ಲು ತೂರಾಟ ನಡೆದ ನಾಲ್ಕು ದಿನಗಳ ಬಳಿಕ ಗೃಹ ಸಚಿವ ಪರಮೇಶ್ವರ್ ಉದಯಗಿರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಯಾಕಾಯಿತು, ಏನಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ವಿಸಿಟ್ ಮಾಡಿದ್ದೆ. ಪ್ರಾಥಮಿಕ ಹಂತದ ಮಾಹಿತಿ ತಿಳಿದುಕೊಂಡಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ಹೀಗಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೂ ಕೂಡ ಇಂತಹ ಘಟನೆಗಳಲ್ಲಿ ರಾಜಕೀಯ ಮಾಡಬಾರದು. ಅಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಾರ್ವಜನಿಕರು ಇಂತಹ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಪರಮೇಶ್ವರ್ ಜನರಲ್ಲಿ ಮನವಿ ಮಾಡಿಕೊಂಡರು.
ಪೊಲೀಸ್ ಹಾಗೂ ವಾಹನಗಳ ಮೇಲೆ ಕಲ್ಲು ಹೊಡೆದವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಈಗಾಗಲೇ ಸಿಸಿಟಿವಿ ದೃಶ್ಯ ಆಧರಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರು ಎಷ್ಟೇ ಬಲಾಢ್ಯರಾಗಿದ್ರೂ ಕ್ರಮ ತೆಗೆದುಕೊಳ್ಳುತ್ತೇವೆ. ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಸಮಾಜದಲ್ಲಿ ಶಾಂತಿ ಕಾಪಾಡಲಿಕ್ಕೆ ಪೊಲೀಸ್ ನವರು ಇರೋದು. ಕಾನೂನು ರಕ್ಷಣೆಗೆ ಪೊಲೀಸರ ಮೊದಲ ಆದ್ಯತೆ ಇರತ್ತೆ. ಘಟನೆ ಆದ ಬಳಿಕ ಕೆಲವರು ಹೇಳಿಕೆ ನೀಡ್ತಾರೆ. ಅದನ್ನ ಹೇಳಬಾರದು ಎಂದು ಹೇಳಲು ಸಾಧ್ಯವಿಲ್ಲ. ಅಂತಹ ಹೇಳಿಕೆಗಳಿಂದ ಪೊಲೀಸ್ ನವರನ್ನ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಅಂತಹ ಎಲ್ಲ ಟ್ರೈನಿಂಗ್ ಇರುತ್ತೆ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಠಾಣೆ ಮೇಲೆ ಕಲ್ಲು ತೂರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಯಾಕಿಲ್ಲ.. ನಷ್ಟ ಮಾಡಿದವರಿಂದ ನಷ್ಟ ಭರಿಸುತ್ತೀರಾ ಎಂಬ ಪ್ರಶ್ನೆಗೆ, ಉತ್ತರ ಪ್ರದೇಶ ಮಾದರಿಯ ಕ್ರಮ ಕರ್ನಾಟಕಕ್ಕೆ ಸದ್ಯ ಅಗತ್ಯ ಇಲ್ಲ. ಇದರ ಬಗ್ಗೆ ಅನೇಕ ಚರ್ಚೆ ಆಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ತೆಗೆದುಕೊಂಡು ಹೋಗುವ ಕೆಲಸ ಆಗುತ್ತದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ಮುಂದೆ ಬೇಕಿದ್ರೆ ನೋಡೋಣ. ಜನರು ಪೊಲೀಸರಿಗೆ ಸಹಕಾರ ನೀಡಬೇಕು. ಇದನ್ನ ಹೊರತುಪಡಿಸಿ ನಾವೇ ಕಾನೂನು ಕೈಗೆ ತೆಗೆದುಕೊಳ್ಳೋದು ಬೇಡ ಎಂದರು.
Four days after the stone-pelting incident triggered by a derogatory social media post in Udayagiri, Home Minister G. Parameshwara on Friday visited the police station and held a meeting with senior police officers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm