ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am