ಬ್ರೇಕಿಂಗ್ ನ್ಯೂಸ್
15-02-25 12:52 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.
ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದಕ್ಕೂ ಮುನ್ನ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13ರಂದು ದೂರು ದಾಖಲಾಗಿತ್ತು.
The Karnataka government has transferred the probe into the alleged Rs 167 crore COVID-19 scam to the Criminal Investigation Department (CID), nearly two months after an FIR was registered over financial irregularities during the pandemic.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am