ಬ್ರೇಕಿಂಗ್ ನ್ಯೂಸ್
20-02-25 02:47 pm HK News Desk ಕರ್ನಾಟಕ
ಮೈಸೂರು, ಫೆ.20: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಲು ಯುವಕರಿಗೆ ಪ್ರಚೋದನೆ ನೀಡಿ ತಲೆಮರೆಸಿಕೊಂಡಿದ್ದ ಮುಸ್ಲಿಂ ಧರ್ಮಗುರು, ಮೌಲ್ವಿ ಮುಫ್ತಿ ಮುಷ್ತಾಕ್ ನನ್ನು ಮೈಸೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿಯೆಂದು ಗುರುತಿಸಲಾಗಿದ್ದ ಮೌಲ್ವಿ ಮುಷ್ತಾಕ್ ಮಕ್ಬೋಲಿಯನ್ನು ಸತತ ಕಾರ್ಯಾಚರಣೆ ಬಳಿಕ ಸಿಸಿಬಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಪ್ರಚೋದನಕಾರಿ ಭಾಷಣದ ನಂತರವೇ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿತ್ತು. ಈತನ ಭಾಷಣದ ತುಣುಕುಗಳು ರಾತ್ರೋರಾತ್ರಿ ಎಲ್ಲೆಡೆ ವೈರಲ್ ಆಗಿತ್ತು. ಎಲ್ಲರೂ ಒಗ್ಗಟ್ಟಾಗಿರೋಣ, ಇಸ್ಲಾಮ್ ಧರ್ಮವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮೌಲ್ವಿ ಯುವಕರನ್ನು ಛೂಬಿಡುವ ರೀತಿ ಅಬ್ಬರದ ಭಾಷಣ ಮಾಡಿದ್ದನು.
ಘಟನೆ ನಡೆದು 10 ದಿನಗಳ ಬಳಿಕ ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಬಂಧನವಾಗಿದ್ದು , ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಈತನ ಬಂಧನಕ್ಕಾಗಿ ಬಿಜೆಪಿ ನಾಯಕರು ಸತತ ಹೇಳಿಕೆ ನೀಡಿ ಒತ್ತಡ ತಂತ್ರ ಅನುಸರಿಸಿದ್ದರು.
ಪೋಸ್ಟ್ ಹಾಕಿದ್ದ ಆರೋಪಿ ಗಡೀಪಾರು ಚಿಂತನೆ
ಇದೇ ವೇಳೆ, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್ ಗಡಿಪಾರು ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನಿನ್ನೆಯಷ್ಟೇ ಜಾಮೀನನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಸತೀಶ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪುನಃ ಗಲಭೆ ಆಗುತ್ತದೆ ಎಂದು ಹೇಳಿ ನಿರ್ದಿಷ್ಟ ಅವಧಿಯವರಗೆ ಜಿಲ್ಲೆಯಿಂದ ಹೊರಗಿರುವಂತೆ ಪೊಲೀಸರ ಸೂಚಿಸಿದ್ದಾರೆ. ಸತೀಶ್ ಹಾಗು ಅವರ ಕುಟುಂಬದ ಹಿತದೃಷ್ಠಿಯಿಂದ ಮತ್ತು ಆಸ್ತಿ- ಪಾಸ್ತಿ ರಕ್ಷಣೆ ಉದ್ದೇಶದಿಂದ ಗಡಿಪಾರು ಮಾಡಲು ಚಿಂತನೆ ಎಂದು ನೋಟಿಸ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.
CCB police on Thursday arrested a cleric who had made provocative speeches in connection with the stone-pelting incident at Udayagiri police station. Mufti Mushtaq is the arrested accused. The police arrested the accused 11 days after the incident. A video of the cleric went viral after the incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm