ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್‌ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್‌ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm